ಸಾರಾಂಶ
ಕನ್ನಡಪ್ರಭ ವಾರ್ತೆ ಬೀದರ್
ರಾಜ್ಯ ಸರ್ಕಾರದಿಂದ ವಾಲ್ಮೀಕಿ ನಿಗಮದಲ್ಲಿ ಆಗಿರುವ ಭಾರಿ ಅವ್ಯವಹಾರದ ವಿರುದ್ಧ ಶುಕ್ರವಾರ ಬೀದರ್‌ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಪ್ರತಿಭಟನೆಯು ನಗರದ ಡಾ. ಅಂಬೇಡ್ಕರ ವೃತ್ತದ ಬಳಿಯ ಪ್ರವಾಸಿ ಮಂದಿರದಿಂದ ಆರಂಭಗೊಂಡು ಡಾ. ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಅಲ್ಲಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಲಾಯಿತು.
ಪ್ರತಿಭಟನಾ ಮೆರವಣಿಗೆ ಬರುವುದಕ್ಕೂ ಮುನ್ನ ಪೊಲೀಸರು ಜಿಲ್ಲಾಧಿಕಾರಿಗಳ ಮುಖ್ಯ ಗೇಟ್ ಬಂದ ಮಾಡಿ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು. ಪ್ರತಿಭಟನಾ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಲೆ ಮುಖ್ಯ ದ್ವಾರದ ಮುಂದೆ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ಅಲ್ಲಿಯೇ ತಡೆದರು.ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ, ಮುಖ್ಯಮಂತ್ರಿ ರಾಜಿನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಅಲ್ಲದೇ ಕೈಯಲ್ಲಿ ಭಿತ್ತಿ ಪತ್ರ ಹಿಡಿದುಕೊಂಡಿದ್ದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಕೆಲ ಹೊತ್ತು ನೂಕು ನುಗ್ಗಲು ನಡೆಯಿತು.
ಬಿಜೆಪಿ ಪ್ರಮುಖರು ಮಾತನಾಡಿ, ರಾಜ್ಯ ಸರ್ಕಾರ ಅವ್ಯವಹಾರದಲ್ಲಿ ಭಾಗಿಯಾಗಿ ಮುಗ್ಧ ದಕ್ಷ ಅಧಿಕಾರಿಯ ಸಾವಿಗೆ ಕಾರಣವಾದ ಈ ಸರ್ಕಾರ ಅಧಿಕಾರದಲ್ಲಿ ಇರಲು ಯಾವುದೇ ನೈತಿತಕೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಮಾಜಿ ಸಂಸದ ಭಗವಂತ ಖೂಬಾ, ನಗರ ಅಧ್ಯಕ್ಷ ಶಶಿಧರ ಹೊಸಳ್ಳಿ, ಪಕ್ಷದ ಪ್ರಮುಖರಾದ ಈಶ್ವರಸಿಂಗ ಠಾಕೂರ, ಬಾಬು ವಾಲಿ, ಗುರುನಾಥ ಜ್ಯಾಂತಿಕರ್, ಶಕುಂತಲಾ ಬೆಲ್ದಾಳೆ, ರಾಜಶೇಖರ ನಾಗಮೂರ್ತಿ, ಅರಹಂತ ಸಾವಳೆ, ರೇವಣಸಿದ್ದಪ್ಪ ಜಲಾದೆ, ಪೀರಪ್ಪ ಯರನಳ್ಳಿ, ಕಿರಣ ಪಾಟೀಲ್, ಪ್ರದೀಪ ವಾತಾಡೆ, ಬಸವರಾಜ ಪವಾರ, ಮಹೇಶ ಪಾಲಂ, ವೀರು ದಿಗ್ವಾಲ್, ವಿರೇಶ ಸ್ವಾಮಿ, ಚಂದ್ರಶೇಖರ ಗಾದಾ, ಉಪೇಂದ್ರ ದೇಶಪಾಂಡೆ, ಜಗನ್ನಾಥ ಜಮಾದಾರ, ಮಹಿಳಾ ಘಟಕದ ಅಧ್ಯಕ್ಷೆ ಲುಂಬಣಿ ಗೌತಮ ಸೇರಿದಂತೆ ಅನೇಕರು ಭಾಗವಹಿಸಿದರು.
)
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))