ನೇಹಾ ಹತ್ಯೆ ಪ್ರಕರಣ: ಭೀಮ್‌ ಆರ್ಮಿ ಪ್ರತಿಭಟನೆ

| Published : Apr 22 2024, 02:04 AM IST

ಸಾರಾಂಶ

ಹುಬ್ಬಳ್ಳಿಯ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್‌ನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯ.

ಕನ್ನಡಪ್ರಭ ವಾರ್ತೆ ಶಹಾಪುರ

ಹುಬ್ಬಳ್ಳಿಯ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್‌ನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಸಂಘಟನೆ ವತಿಯಿಂದ ತಹಸೀಲ್ದಾರ್ ಗ್ರೇಡ್-2 ಸೇತುಮಾಧವ ಕುಲಕರ್ಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ತಾಲೂಕಾಧ್ಯಕ್ಷ ಶರಣ್ ಎಸ್. ಗೊಂದೆನವರ್ ಅವರು, ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ಮಹಿಳೆಯರ ಮೇಲೆ ಅತ್ಯಾಚಾರ ಕೊಲೆಗಳು ನಡೆದಿರುವುದು ಇದೆ ಮೊದಲಲ್ಲ. ಹಿಂದೆ ಹಲವಾರು ಬಾರಿ ಇಂಥ ಘಟನೆಗಳು ನಡೆದಿವೆ. ತಂದೆ-ತಾಯಿ ಹಾಗೂ ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸುವುದು ಕಷ್ಟವಾಗುತ್ತದೆ.

ನಾವೆಲ್ಲರೂ ಜಾಗೃತರಾಗಬೇಕು. ಇಂಥ ದುಷ್ಕೃತ್ಯ ನಡೆದಾಗಲೂ ಕಣ್ಮುಚ್ಚಿ ಕುಳಿತುಕೊಳ್ಳುವುದು ನ್ಯಾಯವಲ್ಲ. ಜಾತಿ, ಮತ, ಪಂಥ ಮರೆತು ಒಗ್ಗಟ್ಟಿನಿಂದ ಖಂಡಿಸಬೇಕು. ಆರೋಪಿಗೆ ಗಲ್ಲು ಶಿಕ್ಷೆಯಾದಾಗ ಮಾತ್ರ ನೇಹಾ ಸಾವಿಗೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ತಿಳಿಸಿದ್ದಾರೆ. ಸಿದ್ದಪ್ಪ, ಅಮಾತೆಪ್ಪ, ರಮೇಶ್, ಲಕ್ಷ್ಮಣ ಮೌಲಾಲಿ ಇತರರಿದ್ದರು.