ಕನ್ನಡಪ್ರಭ ವಾರ್ತೆ ಕುಣಿಗಲ್ ಕಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗೇಗೌಡನ ಪಾಳ್ಯದ ವಾಸಿಗಳಿಗೆ ಹಲವಾರು ದಿನಗಳಿಂದ ನೀರಿನ ಸಮಸ್ಯೆ ಉಂಟಾಗಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಪಂ ಮುಂದೆ ಪ್ರತಿಭಟನೆ ನಡೆಸಿದರು. ಸರ್ಕಾರದ ನಿಯಮದಂತೆ ದಿನ ಬಿಟ್ಟು ದಿನ ಟ್ಯಾಂಕರ್ ನಿಂದ ನೀರು ಸರಬರಾಜು ಮಾಡಬೇಕು. ಆದರೆ ಅಧಿಕಾರಿಗಳು ವಾರಕ್ಕೆ ಒಮ್ಮೆ ನೀರು ಕೊಡುತ್ತಿದ್ದಾರೆ. ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗಿದ್ದು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಸ್ಥಳಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾರದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಗ್ರಾಮದಲ್ಲಿರುವ ಕೊಳವೆ ಬಾವಿಯನ್ನು ದುರಸ್ತಿ ಪಡಿಸಿ ಅದರಿಂದ ಸಂಪೂರ್ಣವಾಗಿ ನೀರಿನ ಸೌಲಭ್ಯ ಒದಗಿಸಬಹುದು. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಸಬೂಬು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನು ಮನವೊಲಿಸುವಲ್ಲಿ ತಾಲೂಕು ಪಂಚಾಯಿತಿ ವ್ಯವಸ್ಥಾಪಕರಾದ. ಕಾಂತರಾಜು ಹರಸಹಾಸ ಪಡಬೇಕಾಯಿತು ನಂತರ ನೀರಿನ ಸಮಸ್ಯೆಯನ್ನು ತಕ್ಷಣ ಬಗೆಹರಿಸುವ ಭರವಸೆಯ ಮೇಲೆ ಪ್ರತಿಭಟನೆಯನ್ನು ಕೈ ಬಿಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.ನೀರಿಗಾಗಿ ಗ್ರಾಪಂ ಮುಂದೆ ಪ್ರತಿಭಟನೆ
ಕಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗೇಗೌಡನ ಪಾಳ್ಯದ ವಾಸಿಗಳಿಗೆ ಹಲವಾರು ದಿನಗಳಿಂದ ನೀರಿನ ಸಮಸ್ಯೆ ಉಂಟಾಗಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಪಂ ಮುಂದೆ ಪ್ರತಿಭಟನೆ ನಡೆಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.