ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ

| Published : Nov 12 2025, 03:15 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯನ್ನಾಗಿ ಅಧಿಕೃತವಾಗಿ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಉತ್ತರ ಕರ್ನಾಟಕ ವಿಕಾಸ ವೇದಿಕೆ ಸೇರಿ ಹಲವು ಸಂಘಟನೆಗಳಿಂದ ನಗರ ಹೊರಭಾಗದ ಸುವರ್ಣಸೌಧದ ಬಳಿ ಮಂಗಳವಾರ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.ಸುವರ್ಣ ವಿಧಾನಸೌಧದ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಉತ್ತರ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಕಿತ್ತೂರು ಕರ್ನಾಟಕ ಭಾಗಕ್ಕೆ ಪೂರ್ಣ ಪ್ರಮಾಣದ ಸಚಿವಾಲಯ ಆರಂಭಿಸಬೇಕು. ವಿವಿಧ ಇಲಾಖೆಗಳ ಕಾರ್ಯದರ್ಶಿ ಮಟ್ಟದ ಕಚೇರಿಗಳು ಬೆಳಗಾವಿಯಿಂದಲೇ ಕಾರ್ಯನಿರ್ವಹಿಸಬೇಕು ಹಾಗೂ ಈ ಭಾಗದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯನ್ನಾಗಿ ಅಧಿಕೃತವಾಗಿ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಉತ್ತರ ಕರ್ನಾಟಕ ವಿಕಾಸ ವೇದಿಕೆ ಸೇರಿ ಹಲವು ಸಂಘಟನೆಗಳಿಂದ ನಗರ ಹೊರಭಾಗದ ಸುವರ್ಣಸೌಧದ ಬಳಿ ಮಂಗಳವಾರ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.ಸುವರ್ಣ ವಿಧಾನಸೌಧದ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಉತ್ತರ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಕಿತ್ತೂರು ಕರ್ನಾಟಕ ಭಾಗಕ್ಕೆ ಪೂರ್ಣ ಪ್ರಮಾಣದ ಸಚಿವಾಲಯ ಆರಂಭಿಸಬೇಕು. ವಿವಿಧ ಇಲಾಖೆಗಳ ಕಾರ್ಯದರ್ಶಿ ಮಟ್ಟದ ಕಚೇರಿಗಳು ಬೆಳಗಾವಿಯಿಂದಲೇ ಕಾರ್ಯನಿರ್ವಹಿಸಬೇಕು ಹಾಗೂ ಈ ಭಾಗದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಹಿರಿಯ ವಕೀಲ ಬಿ.ಡಿ.ಹಿರೇಮಠ ಮಾತನಾಡಿ, ನಮ್ಮ ಭಾಗದ ಅಭಿವೃದ್ಧಿಗಾಗಿ ನಮ್ಮೆಲ್ಲ ಬೇಡಿಕೆಗಳನ್ನು ಪೂರೈಸಬೇಕು. ಜೊತೆಗೆ ಬೆಂಗಳೂರಿನಂತ ನಗರಗಳಿಗೆ ವಲಸೆ ಹೋಗುತ್ತಿರುವ ಈ ಭಾಗದ ವಿದ್ಯಾವಂತ ಉದ್ಯೋಗಸ್ಥರಿಗೆ ಉದ್ಯೋಗ ಕಲ್ಪಿಸಲು ಐಟಿ- ಬಿಟಿ ಕಂಪನಿಗಳನ್ನು ಆರಂಭಿಸಬೇಕು. ಇಲ್ಲವಾದಲ್ಲಿ, ನಮ್ಮ ಬೆಳಗಾವಿಯ ಸುವರ್ಣಸೌಧದ ಮೇಲೆ ಪ್ರತ್ಯೇಕ ಕಿತ್ತೂರು ಕರ್ನಾಟಕದ ಧ್ವಜ ಹಾರಾಡುತ್ತದೆ. ಅಷ್ಟೇ ಅಲ್ಲದೆ, ಅಧಿವೇಶನದ ವೇಳೆ ದೊಡ್ಡಮಟ್ಟದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ, ಅಶೋಕ ಪೂಜಾರಿ, ಅಡಿವೇಶ ಇಟಗಿ, ನಾಗೇಶ್ ಗೋಳಶೆಟ್ಟಿ, ಮಾಣಿಕ್ಯ ಚಿಲ್ಲೂರ, ಪ್ರೊ. ಎ.ವೈ.ಪಂಗಣ್ಣವರ, ಸಂಜೀವ್ ಪೂಜಾರಿ, ವಿ.ಜಿ.ನೀರಲಗಿಮಠ, ಚಂದ್ರಶೇಖರ ಸವಡಿ, ಪ್ರವೀಣ್ ನಾಯ್ಕ, ರಿಯಾಜ ಪಟಾದ, ಉದಯ ಕರಜಗಿಮಠ, ಸಿ.ಬಿ.ಸಂಗೊಳ್ಳಿ, ಜಿ.ವಿ.ಚರಂತಿಮಠ, ಸಿ.ಬಿ.ಜೋಳದ, ಆಲಂ ನಧಾಪ, ಕಾಶೀಮಸಾಬ ಮಕಾನದಾರ, ಬೋರಸಾಬ್ ಸಣ್ಣಕ್ಕಿ, ದೀಪಕ ಶೀಗಲಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.