ಬಿಜೆಪಿ ಒಬಿಸಿ ಮೋರ್ಚಾದಿಂದ ಹಾಸನದಲ್ಲಿ ಪ್ರತಿಭಟನೆ

| Published : May 28 2024, 01:10 AM IST

ಸಾರಾಂಶ

ಪಶ್ಚಿಮ ಬಂಗಾಳ ಹೈಕೋರ್ಟ್ ಅಲ್ಪಸಂಖ್ಯಾತರ ಕುರಿತ ತೀರ್ಪನ್ನು ಪಶ್ಚಿಮ ಬಂಗಾಳದ ಸರ್ಕಾರ ಮಾನ್ಯ ಮಾಡಲು ಆದೇಶಿಸುವಂತೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದಿಂದ ಸೋಮವಾರ ಪ್ರತಿಭಟಿಸಿ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಧರಣಿ । ಅಲ್ಪಸಂಖ್ಯಾತರ ಕುರಿತ ತೀರ್ಪು ಮಾನ್ಯಕ್ಕೆ ಮನವಿ

ಕನ್ನಡಪ್ರಭ ವಾರ್ತೆ ಹಾಸನ

ಪಶ್ಚಿಮ ಬಂಗಾಳ ಹೈಕೋರ್ಟ್ ಅಲ್ಪಸಂಖ್ಯಾತರನ್ನು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಿಂದ ಬೇರ್ಪಡಿಸಲಾದ ತೀರ್ಪನ್ನು ಪಶ್ಚಿಮ ಬಂಗಾಳದ ಸರ್ಕಾರ ಮಾನ್ಯ ಮಾಡಲು ಆದೇಶಿಸುವಂತೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದಿಂದ ಸೋಮವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಹಾಸನ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಬಿ.ಆರ್. ಜಯಣ್ಣ ಮಾಧ್ಯಮದೊಂದಿಗೆ ಮಾತನಾಡಿ, ‘ಕರ್ನಾಟಕ ರಾಜ್ಯ ಬಿಜೆಪಿ. ಹಿಂದುಳಿದ ವರ್ಗಗಳ ಮೋರ್ಚಾವು ಪಶ್ಚಿಮ ಬಂಗಾಳದ ಕೋಲ್ಕತ್ತ ಹೈಕೋರ್ಟ್ ನೀಡಿರುವ ಅಲ್ಪಸಂಖ್ಯಾತರನ್ನು ಹಿಂದುಳಿದ ವರ್ಗಗಳ ಮಿಸಲಾತಿ ಪಟ್ಟಿಯಿಂದ ಬೇರ್ಪಡಿಸಲಾದ ತೀರ್ಪನ್ನು ಸ್ವಾಗತಿಸುತ್ತೇವೆ’ ಎಂದು ಹೇಳಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದೇಶದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ನೀಡಿರುವ ಹೇಳಿಕೆಯನ್ನು ಖಂಡಿಸುತ್ತೇವೆ. ತಾವು ಪಶ್ಚಿಮ ಬಂಗಾಳದ ಹೈಕೋರ್ಟ್ ನೀಡಿರುವ ತೀರ್ಪನ್ನು ಪಶ್ಚಿಮ ಬಂಗಾಳ ಸರ್ಕಾರವು ಗೌರವಿಸಲು ಆದೇಶಿಸುವ ಮೂಲಕ ರಾಷ್ಟ್ರದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ತಮ್ಮಲ್ಲಿ ವಿನಮ್ರವಾಗಿ ವಿನಂತಿಸುತ್ತೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ರೇಣುಕಪ್ಪ, ಅರಸೀಕೆರೆ ತಾಲೂಕು ಅಧ್ಯಕ್ಷ ದಿನೇಶ್, ಮಾಜಿ ಅಧ್ಯಕ್ಷ ಮೈಲಾರಪ್ಪ, ಶೋಭನ್ ಬಾಬು, ಗುರುಪ್ರಸಾದ್, ರೈತ ಮೋರ್ಚಾ ಅಧ್ಯಕ್ಷ ನಾರಾಯಣಗೌಡ ಇತರರು ಇದ್ದರು.