ಸಾರಾಂಶ
ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಖಂಡಿಸಿ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ದೆಹಲಿಯಲ್ಲಿ ಈಚೆಗೆ ನಡೆದ ಬಾಂಬ್ ಸ್ಪೋಟ ಖಂಡಿಸಿ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ವೇದಿಕೆಯ ಜಿಲ್ಲಾ ಸಂಯೋಜಕ ಭೋಜೇಗೌಡ ಮಾತನಾಡಿ, ಪುರುಷರಿಂದ ನಡೆಯುತ್ತಿದ್ದ ಭಯೋತ್ಪಾದನೆ ಇಂದು ವಿದ್ಯಾವಂತ ಮುಸ್ಲಿಂ ಮಹಿಳೆಯರಿಂದಲೂ ಆಗುತ್ತಿದೆ. ಇದು ಸಮಾಜಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಲವ್ ಜಿಹಾದ್ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಜಿಹಾದಿ ಮನಸ್ಥಿತಿಯ ಜನರಿಂದ ಮದರಸಗಳಲ್ಲಿ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ. ದೇಶದಾದ್ಯಂತ ಮದರಸಗಳನ್ನು ಬಂದ್ ಮಾಡುವ ಮೂಲಕ ಅವುಗಳನ್ನು ಸರ್ಕಾರ ನಿಯಂತ್ರಿಸಬೇಕು ಎಂದು ಹೇಳಿದರು.ದೇಶದಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕುವ ಕೆಲಸ ನಮ್ಮಿಂದ ಆಗಬೇಕು. ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ದೇಶದ ಎಲ್ಲೆಡೆ ನೆಲೆಯೂರಿದ್ದಾರೆ. ಗಡಿಯಲ್ಲಿ ನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರಂತೆ, ದೇಶದೊಳಗಿನ ಇಸ್ಲಾಮಿಕ್ ಭಯೋತ್ಪಾದಕರನ್ನು ಮಟ್ಟ ಹಾಕುವ ಕೆಲಸ ಪೊಲೀಸರಿಂದಾಗಬೇಕು. ತಪ್ಪಿದಲ್ಲಿ ಪ್ರಜ್ಞಾವಂತ ನಾಗರೀಕರು ಸೇರಿ ಭಯೋತ್ಪಾದಕರ ಮಟ್ಟ ಹಾಕುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಭಾಷ್ ತಿಮ್ಮಯ್ಯ, ತಾಲೂಕು ಸಂಯೋಜಕ ಎಂ.ಬಿ. ಉಮೇಶ್ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))