5900 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರವು ನಿರ್ಧರಿಸಿದೆ. ಈ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಲೋಮೀಟರ್ ವ್ಯಾಪ್ತಿಯ ಉಳಿದ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದಾಗಿದೆ.

ಧಾರವಾಡ:

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಜಿಲ್ಲೆಯ ಕಲಘಟಗಿ ಬಮ್ಮಿಗಟ್ಟಿ ಕ್ರಾಸ್‌ನಲ್ಲಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನಾಯಕರು, ನಾಗರಿಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ರಾಜ್ಯಾಧ್ಯಕ್ಷ ಅಶ್ವಿನಿ ಕೆ.ಎಸ್. ಮಾತನಾಡಿ, ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಆದೇಶಗಳ ಪ್ರಕಾರ ರಾಜ್ಯಾದಂತ

5900 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರವು ನಿರ್ಧರಿಸಿದೆ. ಈ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಲೋಮೀಟರ್ ವ್ಯಾಪ್ತಿಯ ಉಳಿದ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದಾಗಿದೆ. ಈಗಾಗಲೇ ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ಪ್ರಕಾರ 17 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಯೋಜನೆ ಪ್ರಕಾರ ರಾಜ್ಯದ ಲಕ್ಷಾಂತರ ರೈತ-ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದರು.

ಎಐಡಿಎಸ್‌ಒ ರೈತ ಸಂಘಟನೆ ಮುಖಂಡ ಶರಣಬಸವ ಗೋನವಾರ ಮಾತನಾಡಿ, ರೈತರು-ಕಾರ್ಮಿಕರು-ದಿನಗೂಲಿ ಕೆಲಸ ಮಾಡುವವರು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈ ಶಾಲೆ ಮುಚ್ಚಿದರೆ ಆ ಮಕ್ಕಳ ಗತಿ ಏನು? ರೈತ-ಕಾರ್ಮಿಕರು ಒಂದಾಗಿ ನಮ್ಮ ಮಕ್ಕಳಿಗೋಸ್ಕರ ಹೋರಾಟ ಕಟ್ಟಬೇಕಾಗಿದೆ ಎಂದು ಹೇಳಿದರು.

ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಸದಸ್ಯ ವಿನಯ್ ಚಂದ್ರ ಮಾತನಾಡಿ, ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು. ಒಂದು ಕೆಲವರನ್ನು ಒಲಿಸುವ ರಾಜಕೀಯ ಮಾಡುತ್ತದೆ, ಇನ್ನೊಂದು, ದ್ವೇಷ ಹುಟ್ಟುಹಾಕುತ್ತದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಲ್ಲಿ ಎರಡು ಪಕ್ಷಗಳು ಒಟ್ಟಿಗಿದ್ದಾರೆ ಎಂದು ಖೇದ ವ್ಯಕ್ತಪಡಿಸಿದರು.

ಎಮ್ಮೆಟ್ಟಿ ಗ್ರಾಮದ ಸಂಜೀವ್ ದೇಸಾಯಿ ಮಾತನಾಡಿ, ನಮ್ಮ ಉಳುವ ಭೂಮಿ ಕೊಟ್ಟು ನಮ್ಮೂರಿನಲ್ಲಿ ಶಾಲೆ ಕಟ್ಟಿಸಿದ್ದೇವೆ. ಸರ್ಕಾರ ಅದನ್ನು ಮುಚ್ಚಲು ಬಂದರೆ ನಮ್ಮೂರಿನ ಜನರೆಲ್ಲ ಒಕ್ಕಟ್ಟಾಗಿ ಹೋರಾಡುತ್ತೇವೆ. ನಮ್ಮ ಜೀವ ಹೋದರು ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಅಧ್ಯಕ್ಷತೆ ವಹಿಸಿದ್ದರು. ಸಿಂಧು ಕೌದಿ, ಅಮೃತ್ ಲಮಾಣಿ, ರಾಮು ಎಡ್ಗೆ, ಬಸಪ್ಪ ತಡಸ್, ಮೋಹನ್ ಲಮಾಣಿ, ಶಾಂತೇಶ್ ನಂದಿಕೋಲಮಠ್ ಇದ್ದರು.