ಸಾರಾಂಶ
ವಸತಿ ಯೋಜನೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುರುತಿಸಿ ಆಶ್ರಯ ನಿವೇಶನಕ್ಕೆ ಕಾಯ್ದಿರಿಸಲು ಸದರಿ ಸ್ಥಳೀಯ ಸಂಸ್ಥೆಗಳು ತಮ್ಮ ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಿಸಿದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಇಲಾಖೆ, ಪೌರಾಡಳಿತ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಿ, ಲಭ್ಯ ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ ಸಲ್ಲಿಸಲಾಗಿದೆ
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ವಸತಿ ಹೀನರಿಗೆ ನಿವೇಶನ ಅಥವಾ ಮನೆ ನಿರ್ಮಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರಸ್ವತಿಪುರಂನ ವಸತಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.ಸಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸಮಿತಿ ಪದಾಧಿಕಾರಿಗಳು, 2024-25ರ ಬಜೆಟ್ ನಲ್ಲಿ ಘೋಷಿಸಿರುವಂತೆ ಕೂಡಲೇ ರಾಜ್ಯಾದ್ಯಂತ ನಿವೇಶನ ಮತ್ತು ವಸತಿರಹಿತರ ಸಮೀಕ್ಷೆ ಕಾರ್ಯ ಆರಂಭಿಸಬೇಕು, ರಾಜ್ಯದ ಎಲ್ಲಾ ಗ್ರಾಪಂ, ಪಪಂ, ಪುರಸಭೆ, ನಗರಸಭೆ ಮತ್ತು ನಗರಪಾಲಿಕೆಗೆ ವಸತಿರಹಿತರು ಈಗಾಗಲೇ ಸಲ್ಲಿಸಿರುವ ಹಾಗೂ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಿ ರಾಜೀವ್ ಗಾಂಧಿ ವಸತಿ ನಿಗಮದ ವೆಬ್ಸೈಟ್ ನಲ್ಲಿ ಅಪ್ ಲೋಡ್ ಮಾಡಲು ಸೂಚಿಸಬೇಕು ಎಂದು ಆಗ್ರಹಿಸಿದರು.
ವಸತಿ ಯೋಜನೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುರುತಿಸಿ ಆಶ್ರಯ ನಿವೇಶನಕ್ಕೆ ಕಾಯ್ದಿರಿಸಲು ಸದರಿ ಸ್ಥಳೀಯ ಸಂಸ್ಥೆಗಳು ತಮ್ಮ ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಿಸಿದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಇಲಾಖೆ, ಪೌರಾಡಳಿತ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಿ, ಲಭ್ಯ ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ ಸಲ್ಲಿಸಲಾಗಿದೆ ಎಂದರು.ವಸತಿ ಯೋಜನೆಯ ಸಹಾಯಧನದ ಮೊತ್ತವನ್ನು ಕನಿಷ್ಟ 5 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸುಂದರೇಶ್, ಜಿಲ್ಲಾ ಕಾರ್ಯಾಧ್ಯಕ್ಷ ಎನ್.ಕೆ. ದೇವದಾಸ್, ಜಿಲ್ಲಾಧ್ಯಕ್ಷ ಎಚ್.ಬಿ. ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಜಿ. ಸೋಮರಾಜೇ ಅರಸ್, ಇದ್ದರು.