ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ವಾಟಾಳ್ ನಾಗರಾಜ್ ಮತ್ತು ಕಾರ್ಯಕರ್ತರು ಖಾಲಿ ಕೊಡಗಳನ್ನು ಹಿಡಿದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರೋಧ ಮಾಡಬಾರದು. ಮೇಕೆದಾಟು ಯೋಜನೆಯಿಂದ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಲಭಿಸಲಿದೆ. ಮೇಕೆದಾಟು ವಿಚಾರದಲ್ಲಿ ಯಾರು ಜಗಳವಾಡಬಾರದು ಹಾಗೂ ರಾಜಕೀಯ ಮಾಡಬಾರದು ಎಂದು ತಿಳಿಸಿದರು.
ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಹಾಗೂ ರಾಜ್ಯ ಸರ್ಕಾರ ಕನ್ನಡಿಗರಿಗೆ ಮೋಸ ಮಾಡುತ್ತಿದೆ. ಮೇಕೆದಾಟು ಜಾರಿ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮ, ಇಟ್ಟಿರುವ ಹಣ, ನೀಲನಕ್ಷೆ ಏನ್ ಸಿದ್ಧ ಮಾಡಿದ್ದಾರಾ, ಮತ್ತು ಮೇಕೆದಾಟು ಸ್ಥಳ ಗುರುತಿಸಿರುವ ಕುರಿತು ಮಾಹಿತಿ ಬಹಿರಂಗ ಪಡೆಸಬೇಕು ಎಂದು ಆಗ್ರಹಿಸಿದರು.ಮೇಕೆದಾಟು ಜಾರಿ ಸಂಬಂಧ ಕನ್ನಡ ಪರ ಸಂಘಟನೆಗಳು ಸುಮ್ಮನೆ ಕೂರುವ ಮಾತೇ ಇಲ್ಲ. ತಮಿಳುನಾಡು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್ ಐಜೂರು. ಮುಖಂಡರಾದ ಗಂಗಾಧರ್,ಜಿಲ್ಲಾಧ್ಯಕ್ಷ ಸಿ.ಎಸ್.ಜಯಕುಮಾರ್ ಪುಷ್ಪಲತಾ, ಕೆ.ಜಯರಾಜು, ಕೆಂಪರಾಜು, ಕುಮಾರ್, ಸಿ.ಎಂ.ವಿಜಯಕುಮಾರ್, ಪಿ.ಸುರೇಶ್, ಪಾರ್ಥಸಾರಥಿ ಇತರರು ಭಾಗವಹಿಸಿದ್ದರು.
18ಕೆಆರ್ ಎಂಎನ್ 1.ಜೆಪಿಜಿ
ರಾಮನಗರದ ಐಜೂರು ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.