ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ಕ್ಕೆ ಹೋರಾಟ: ಬಸವರಾಜ

| Published : May 11 2025, 01:31 AM IST

ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ಕ್ಕೆ ಹೋರಾಟ: ಬಸವರಾಜ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಮಿಕರ ವಿರೋಧಿಯಾಗಿರುವ ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಕುರುಗೋಡು

ಕಾರ್ಮಿಕರ ವಿರೋಧಿಯಾಗಿರುವ ಕೇಂದ್ರ ಸರ್ಕಾರದ ನಾಲ್ಕು ಸಂಹಿತೆ ವಿರೋಧಿಸಿ ಮೇ 20ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಸಿಐಟಿಸಿಯು ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಎಸ್‌. ಬಸವರಾಜ್ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಸಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತರಬೇಕೆಂದಿರುವ ನಾಲ್ಕು ಸಂಹಿತೆಗಳು ದುಡಿಯುವ ವರ್ಗಕ್ಕೆ ಮಾರಕವಾಗಿದ್ದು, ಕೂಡಲೇ ಕೈಬಿಡಬೇಕು. ಗ್ರಾಪಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಎಂಟು ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು. ಗ್ರಾಪಂ ನೌಕರರಿಗೆ ಕನಿಷ್ಠ ವೇತನ 36 ಸಾವಿರ ನಿಗದಿ ಮಾಡಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ನಿಗದಿ ಮಾಡಬೇಕು. ಪಿಂಚಣಿ ಕನಿಷ್ಠ ₹6 ಸಾವಿರ ನಿಗದಿಗೊಳಿಸಬೇಕು. ಗುತ್ತಿಗೆ, ಹೊರಗುತ್ತಿಗೆ, ನಿಗದಿತ ಅವಧಿಯ ಉದ್ಯೋಗ, ಅಪ್ರೆಂಟಿಸ್, ಟ್ರೈನಿ, ನ್ಯಾಪ್ಸ್ ಮುಂತಾದ ಹೆಸರಿನಲ್ಲಿ ಕಾರ್ಮಿಕರ ನೇಮಕ ನಿಲ್ಲಿಸಬೇಕು. ಗುತ್ತಿಗೆ, ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು. ಎನ್‌ಪಿಎಸ್‌ ಮತ್ತು ಯುಪಿಎಸ್ ರದ್ದುಪಡಿಸಬೇಕು. ಇಎಸ್ಐ, ಪಿ.ಎಫ್. ಬೋನಸ್ ಪಾವತಿಗಿರುವ ಎಲ್ಲ ವೇತನ ಮಿತಿಯನ್ನು ತೆಗೆಯಬೇಕು. ಗ್ರಾಚ್ಯುಟಿ ಪರಿಹಾರ 90 ದಿನಕ್ಕೆ ಹೆಚ್ಚಿಸುವ ಜತೆಗೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಮಲ್ಲಿಕಾರ್ಜುನ, ಗಾಳಿ ಬಸವರಾಜ, ಎನ್. ಸೋಮಪ್ಪ, ನೆಲ್ಲುಡಿ ಬಸವರಾಜ, ವೀರಸೇನಾ ರೆಡ್ಡಿ, ವಿ. ಜೋಷೇಷ್ ಇದ್ದರು.