ವಕ್ಫ್ ಬೋರ್ಡ್‌ ಬಿಲ್ ತಿದ್ದುಪಡಿಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ

| Published : Dec 15 2024, 02:01 AM IST

ಸಾರಾಂಶ

ಅಸಂವಿಧಾನಿಕ ವಕ್ಫ್ ಬೋರ್ಡ್‌ ಬಿಲ್ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಡಿ. 16ರ ಸೋಮವಾರ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ನವಲಗುಂದ್ ತಿಳಿಸಿದರು. ಗ್ರಾಮದೇವತೆ ಶ್ರೀ ಕರಿಯಮ್ಮ ದೇವಾಲಯದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಲಿದ್ದು ನಗರದ ಪಿ.ಪಿ. ವೃತ್ತದಲ್ಲಿ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಅಸಂವಿಧಾನಿಕ ವಕ್ಫ್ ಬೋರ್ಡ್‌ ಬಿಲ್ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಡಿ. 16ರ ಸೋಮವಾರ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ನವಲಗುಂದ್ ತಿಳಿಸಿದರು.

ನಗರದ ಮಾರುತಿನಗರದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು, ವಕ್ಫ್ ಕಾನೂನು ವಿರೋಧ ಹೋರಾಟ ಸಮಿತಿ ಮತ್ತು ಹಿರಿಯ ನಾಗರಿಕ ವೇದಿಕೆಯ ವತಿಯಿಂದ ಡಿ. 16ರ ಬೆಳಿಗ್ಗೆ 10 ಗಂಟೆಗೆ ನಗರದ ಗ್ರಾಮದೇವತೆ ಶ್ರೀ ಕರಿಯಮ್ಮ ದೇವಾಲಯದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಲಿದ್ದು ನಗರದ ಪಿ.ಪಿ. ವೃತ್ತದಲ್ಲಿ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವಕ್ಫ್ ಬೋರ್ಡ್ ಸ್ವ ಇಚ್ಛೆಯಂತೆ ರೈತರ ಜಮೀನು, ಮಠ ಮಾನ್ಯಗಳ ಆಸ್ತಿ, ಕಟ್ಟಡ ನಿವೇಶನ ದೇವಾಲಯಗಳ ಆಸ್ತಿಗಳು, ಸರ್ಕಾರಿ ಕಟ್ಟಡಗಳು ಸೇರಿದಂತೆ ಇತರೆ ಸರ್ಕಾರದ ಆಸ್ತಿಯನ್ನು ಕಬಳಿಸುವ ಕಾನೂನಿನ ಅಧಿಕಾರವನ್ನು ಪಡೆದಿದೆ. ಇದರಿಂದ ಸಾರ್ವಜನಿಕವಾಗಿ ಸಮಸ್ಯೆಗಳು ಉಲ್ಬಣವಾಗಲಿದ್ದು, ಕೂಡಲೇ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್‌ಗೆ ಕೊಟ್ಟಿರುವ ಅಧಿಕಾರದ ವ್ಯಾಪ್ತಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಲಾಗುವುದು ಎಂದರು.ಎಂ.ಆರ್‌. ನಟರಾಜ್ ಮಾತನಾಡಿ, ಮುಸ್ಲಿಂ ಸಮುದಾಯಕ್ಕೆ ನೀಡಿರುವ ವಕ್ಫ್ ಬೋರ್ಡ್‌ನಂತೆ ಇತರೆ ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಸನಾತನಬೋರ್ಡ್‌ಗಳನ್ನು ಏಕೆ ರಚಿಸಿಲ್ಲವೆಂಬುದನ್ನು ಅರಿಯಬೇಕಿದೆ. ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲ ಮಾಡುವ ಇಂತಹ ಕೆಟ್ಟ ವ್ಯವಸ್ಥೆಯನ್ನು ಸರಿಪಡಿಸುವ ಅಗತ್ಯತೆ ಇದ್ದು, ಈ ವಿಚಾರವಾಗಿ ಎಲ್ಲಾ ಹಿಂದೂ ಸಮಾಜದವರು ಪ್ರಶ್ನಿಸುವ ನಿಟ್ಟಿನಲ್ಲಿ ಪ್ರತಿಭಟನಾ ಮೆರವಣಿಗೆಗೆ ಭಾಗವಹಿಸುವಂತೆ ಮನವಿ ಮಾಡಲಾಗುವುದು ಎಂದರು.ಈ ಸಂದರ್ಭದಲ್ಲಿ ಶಿವಶಂಕರ್‌, ಬೋರೇಗೌಡ್ರು, ಚಂದ್ರಣ್ಣ, ವಿರುಪಾಕ್ಷಪ್ಪ, ದಿವಾಕರ್‌, ನಟರಾಜ್, ನಾಗರಾಜು ಉಪಸ್ಥಿತರಿದ್ದರು.