ಸಾರಾಂಶ
Protest rally led by Patil
ಬೀದರ್: ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಬಂಧನ ಖಂಡಿಸಿ ಶುಕ್ರವಾರ ಬೀದರ್‌ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿದರು.ರ್‍ಯಾಲಿಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ರಾಜ್ಯಪಾಲರಿಗೆ ಬರೆದ ಮನವಿ ಅಪರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ವಿಭಾಗೀಯ ಪ್ರಮುಖ ಈಶ್ವರಸಿಂಗ್ ಠಾಕೂರ, ಗುರುನಾಥ ಜ್ಯಾಂತಿಕರ್, ನಗರ ಅಧ್ಯಕ್ಷ ಶಶಿ ಹೋಸಳ್ಳಿ, ಪೀರಪ್ಪ ಯರನಳ್ಳಿ, ಕಿರಣ ಪಾಟೀಲ್, ಗುರುನಾಥ ರಾಜಗೀರಾ, ಸಂಗಮೇಶ ನಾಸಿಗಾರ, ವೀರು ದಿಗ್ವಾಲ, ಸ್ವಾಮಿದಾಸ ಕೆಂಪೆನೋರ ಸೇರಿದಂತೆ ಇನ್ನಿತರರು ಇದ್ದರು.