ಸಾರಾಂಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್ ರ್‍ಯಾಲಿ ನಡೆಸಿದರು.
ಕನ್ನಡಪ್ರಭವಾರ್ತೆ ಗುಂಡ್ಲುಪೇಟೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್ ರ್‍ಯಾಲಿ ನಡೆಸಿದರು.ವೀರನಪುರ ಬಳಿಯ ಅಮಾನಿ ಕೆರೆಯಿಂದ ಗುಂಡ್ಲುಪೇಟೆ ವರೆಗೆ ನೂರಾರು ಕಾರ್ಯಕರ್ತರು ಬೈಕ್ ರ್‍ಯಾಲಿ ನಡೆಸುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದು ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿದರು. ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಬೇಕು ಎಂಬುದು ರೈತಸಂಘದ ಪ್ರಮುಖ ಆಗ್ರಹವಾಗಿದೆ. ಅಮಾನಿ ಕೆರೆ ಮತ್ತು ಮಲ್ಲಯ್ಯನಪುರ ಕೆರೆಗೆ ನೀರು ತುಂಬಿಸಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು.
ಬರ ಎದುರಾಗಿರುವ ಹಿನ್ನೆಲೆ ಪ್ರತಿ ಗ್ರಾಪಂ ಮಟ್ಟದಲ್ಲಿ ಮೇವು ಬ್ಯಾಂಕ್ ಆರಂಭಿಸಬೇಕು. ಬರ ಪರಿಹಾರದಡಿ ಪ್ರತಿ ಎಕರೆಗೆ ೨೫ ಸಾವಿರ ಪರಿಹಾರ ನೀಡಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ತಹಸೀಲ್ದಾರ್ ಮಂಜುನಾಥ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ಮೇವು ಬ್ಯಾಂಕ್ ಒಂದೆರಡು ದಿನಗಳಲ್ಲಿ ಆರಂಭವಾಗಲಿದೆ. ಪ್ರತಿ ಗ್ರಾಪಂನಲ್ಲಿ ಮೇವು ಬ್ಯಾಂಕ್ ಶುರುವಾಗಲಿದೆ ಎಂದರು. ಪ್ರತಿಭಟನೆಯಲ್ಲಿ ರೈತಸಂಘದ ಮುಖಂಡರಾದ ಶ್ರೀನಿವಾಸ್, ಷಣ್ಮಖಸ್ವಾಮಿ, ವೀರನಪುರ ನಾಗಪ್ಪ, ಉತ್ತಂಗೇರಿ ಹುಂಡಿ ಮಹೇಶ್, ಹಸಿರು ಸೇನೆ ಪ್ರಸಾದ್, ಕೋಡಹಳ್ಳಿ ಸ್ವಾಮಿ ಸೇರಿದಂತೆ ನೂರಾರು ಮಂದಿ ಇದ್ದರು.