ನಿವೇಶನ ಹಂಚಿಕೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಪ್ರತಿಭಟನೆ

| Published : Dec 17 2024, 12:45 AM IST

ನಿವೇಶನ ಹಂಚಿಕೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಸಿಗಬೇಕಾದ ಕನಿಷ್ಠ ಸೌಲಭ್ಯಗಳು ಸಹ ಸಿಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆ ವತಿಯಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು.ಈ ವೇಳೆ ಸಂಘಟನೆಯ ರಾಜ್ಯಾಧ್ಯಕ್ಷ ಡಿ.ವಿ. ನಾರಾಯಣಸ್ವಾಮಿ ಮಾತನಾಡಿ, ದೇಶಕ್ಕೆ ಸ್ವತಂತ್ರ್ಯ ಬಂದು 77 ವರ್ಷಗಳು ಕಳೆದರೂ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಸಿಗಬೇಕಾದ ಕನಿಷ್ಠ ಸೌಲಭ್ಯಗಳು ಸಹ ಸಿಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವ ಪ್ರತಿಯೊಂದಕ್ಕೂ ಹೋರಾಟ ಮಾಡಿ ಪಡೆಯಬೇಕಾಗಿರುವುದು ದುರಾದೃಷ್ಟಕರ ಎಂದರು.

ನಿವೇಶನ ಹಂಚಿಕೆಯಲ್ಲಿ ಅನ್ಯಾಯ

ತಾಲೂಕಿ ಕಸಬಾ ಹೋಬಳಿ, ಹಾರೋಬಂಡೆ ಗ್ರಾಮ ಪಂಚಾಯ್ತಿಗೆ ಸೇರಿದ ಜಡೇನಹಳ್ಳಿ ಗ್ರಾಮದ, ಗ್ರಾಮ ಠಾಣಾ ಜಾಗದಲ್ಲಿ ನಿವೇಶನ ಹಂಚಿಕೆ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನಿವೇಶನದಲ್ಲಿ ಆಗಿರುವ ಅನ್ಯಾಯಸರಿ ಪಡಿಸಿ ಅಕ್ರಮವಾಗಿ ಪಡೆದಿರುವ ನಿವೇಶನಗಳನ್ನು ವಜಾಗೊಳಿಸಿ ಕಾನೂನು ಪ್ರಕಾರ ದಲಿತರಿಗೆ ನಿವೇಶನ, ರಸ್ತೆ ಮತ್ತು ಮೂಲಭೂತ ಸೌಕರ್ಯಗಳು ಒದಗಿಸಿಕೊಬೇಕು ಎಂದರು.

ಜಡೇನಹಳ್ಳಿ ಗ್ರಾಮದ ಏರ್‌ಟೆಲ್ ಟವರ್ ಜಾಗ ಗ್ರಾಮಠಾಣಾ ಜಾಗವಾಗಿದ್ದು ಇದಕ್ಕಾಗಿ 35000 ಸಾವಿರ ರು.ಗಳ ಬಾಡಿಗೆ ಮತ್ತು ಮುಂಗಡ 3 ಲಕ್ಷಗಳನ್ನು ಪಡೆದಿದೆ. ಮತ್ತು ಗ್ರಾಮ ಪಂಚಾಯ್ತಿಗೆ ಮೋಸಮಾಡಿ ಸುಮಾರು ಹತ್ತು ವರ್ಷಗಳಿಂದ ಸರ್ಕಾರಿ ಹಣವನ್ನು ಗುಳುಂ ಮಾಡಿದ್ದಾರೆ. ಅದೇ ಜಡೇನಹಳ್ಳಿ ಗ್ರಾಮಠಾಣಾ ಜಾಗವನ್ನು ಪಕ್ಕದ ಊರಿನ ಮಹಿಳೆಯೊಬ್ಬರ ಹೆಸರಿಗೆ ಅಕ್ರಮವಾಗಿ ನೀಡಲಾಗಿದೆ ಎಂದರು.

ಅನಿರ್ದಿಷ್ಟಾವಧಿ ದರಣಿ

ಈಗಾಗಲೇ ಹಲವಾರು ಬಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದು ಮನವಿಗಳನ್ನು ನೀಡಿದ್ದರೂ ಸಹಾ ಇದುವರೆಗೂ ನಮ್ಮ ಮನವಿಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಾ ಆದುದರಿಂದ ನಮ್ಮ ಬೇಡಿಕೆಗಳ ಈಡೇರಿಕೆಯಾಗುವವರೆಗೂ ಅನಿರ್ದಿಷ್ಟಾವಧಿ ಧರಣಿ ಮುಂದುರೆಯುತ್ತದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆಯ ವೆಂಕಟರಮಪ್ಪ, ಎಂ. ಮುನಿರಾಜು, ವಿ. ಕೃಷ್ಣಮೂರ್ತಿ, ಎನ್.ಬಿ. ನರಸಿಂಹಮೂರ್ತಿ, ಜಿ. ಮೂರ್ತಿ, ಆರ್. ಸುರೇಶ್, ರಾಜ್ಯ ಉಪಾಧ್ಯಕ್ಷರು, ಕಾರ್ಮಿಕ ಘಟಕ, ಶಿಶ್ನಘಟ್ಟ ಗಿಲೀಕರ್, ರಾಜ್ಯ ಕಾರ್ಯದರ್ಶಿ, ವಿನೋದ, ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್, ಗಂಗಪ್ಪ, ಮತ್ತಿತರರು ಇದ್ದರು

ಸಿಕೆಬಿ-1 ಚಿಕ್ಕಬಳ್ಳಾಪುರ ನಗರದಲ್ಲಿ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆ ವತಿಯಿಂದ ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು.