ತುಮಕೂರು ತಾಲೂಕಿನ ಗುಲಗಂಜಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ತುಮಕೂರುತುಮಕೂರು ತಾಲೂಕಿನ ಗುಲಗಂಜಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಹಳ್ಳಿಯ ಜನರು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಪ್ರತಿಭಟನೆಯನ್ನ ಉದ್ದೇಶಿಸಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ, ಲಕ್ಕಪ್ಪ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಗುಬ್ಬಿ ವೀರಣ್ಣನವರು ಕಟ್ಟಿಸಿ, ಬೆಳೆಸಿರುವ ಗುಲಗಂಜಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಸಮುದ್ರನಹಳ್ಳಿ ಮ್ಯಾಗ್ನೆಟ್ ಗೆ ವಿಲೀನ ಮಾಡಲು ಮುಂದಾಗಿದೆ. ಈ ನಿರ್ಧಾರ ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಪದಾಧಿಕಾರಿಗಳಾದ ಭರತ್, ಸಂದೀಪ್ ಮತ್ತು ಗ್ರಾಮದ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.