ಸಾರಾಂಶ
ಮುಂಗಾರು ಬೆಳೆಗಳಿಗೆ ಪರಿಹಾರ ನೀಡುವಂತೆ ಹಲವು ಬಾರಿ ಬಿಜೆಪಿ ಪಕ್ಷದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸರ್ಕಾರ ಕೆಲವೇ ಕೆಲ ಬೆಳೆಗಳಿಗೆ ಮಾತ್ರ ಪರಿಹಾರ ಒದಗಿಸಿದೆ. ಆದ್ದರಿಂದ ಸರ್ಕಾರ ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ಸೋಯಾಬಿನ್ ಬೆಳೆಗಳಿಗೂ ಪರಿಹಾರ ನೀಡಬೇಕು.
ನವಲಗುಂದ:
ಅತಿವೃಷ್ಟಿಯಿಂದ ಮುಂಗಾರು ಬೆಳೆನಾಶವಾಗಿದ್ದರೂ, ಪರಿಹಾರ ಕೊಟ್ಟಿಲ್ಲ. ಕುಂಟ ನೆಪ ಹೇಳಿಕೊಂಡು ಕಾಲಹರಣ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನ. 15ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು.ಅವರು ಗುರುವಾರ ಇಬ್ರಾಹಿಂಪುರ ಗ್ರಾಮದಲ್ಲಿ ಗೋವಿನಜೋಳ ಒಣಹಾಕಿರುವ ರೈತರ ಬಳಿ ತೆರಳಿ ಸಮಸ್ಯೆ ಆಲಿಸಿದ ಅವರು, ಜಿಲ್ಲಾದ್ಯಂತ ಮುಂಗಾರು ಹಂಗಾಮಿನಲ್ಲಿ ಉಂಟಾದ ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆಗಳಿಗೆ ಸರ್ಕಾರ ಈ ವರೆಗೂ ಸಮರ್ಪಕವಾಗಿ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದರು.
ಮುಂಗಾರು ಬೆಳೆಗಳಿಗೆ ಪರಿಹಾರ ನೀಡುವಂತೆ ಹಲವು ಬಾರಿ ಬಿಜೆಪಿ ಪಕ್ಷದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸರ್ಕಾರ ಕೆಲವೇ ಕೆಲ ಬೆಳೆಗಳಿಗೆ ಮಾತ್ರ ಪರಿಹಾರ ಒದಗಿಸಿದೆ. ಆದ್ದರಿಂದ ಸರ್ಕಾರ ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ಸೋಯಾಬಿನ್ ಬೆಳೆಗಳಿಗೂ ಪರಿಹಾರ ನೀಡಬೇಕು. ಕ್ಷೇತ್ರದಲ್ಲಿ ಕೇವಲ ಹೆಸರು ಬೆಳೆಯನ್ನು ಮಾತ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಸುತ್ತಿದೆ. ಬದಲಾಗಿ ಗೋವಿನಜೋಳ ಹಾಗೂ ಸೋಯಾಬಿನ್ ಬೆಳೆಗಳಿಗೂ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭ ಮಾಡದೇ ರೈತಕುಲಕ್ಕೆ ಅನ್ಯಾಯ ಮಾಡುತ್ತಿರುವ ಜತೆಗೆ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡದ ರಾಜ್ಯ ಸರ್ಕಾರದ ದುರಾಡಳಿತ ಖಂಡಿಸಿ ನವಲಗುಂದ ಪಟ್ಟಣದಲ್ಲಿ ಶನಿವಾರ ರೈತರ ಜತೆಗೂಡಿ ಪ್ರತಿಭಟನೆ ನಡೆಸಲಾಗುವುದು. ಕ್ಷೇತ್ರದ ಸಾವಿರಾರು ರೈತರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))