ಹಾಲಿನ ಬೆಲೆ ಏರಿಕೆ ಖಂಡಿಸಿ ಎಮ್ಮೆಯೊಂದಿಗೆ ಪ್ರತಿಭಟನೆ

| Published : Jul 03 2024, 12:20 AM IST

ಸಾರಾಂಶ

ರಾಜ್ಯದ ಜನರು ಸಂಕಷ್ಟದಲ್ಲಿದ್ದು ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡದೇ ಬೆಲೆ ಏರಿಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹುಡುಗಾಟ ಆಡುತ್ತಿದ್ದಾರೆ.

ಧಾರವಾಡ:

ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವ ಕ್ರಮ ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಎಮ್ಮೆ ತರುವ ಮೂಲಕ ಪ್ರತಿಭಟನೆ ನಡೆಸಿದರು.

ಗ್ಯಾರಂಟಿ ಯೋಜನೆ ಹೆಸರಿನಲ್ಲಿ ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಟ್ಟಿಸಿದೆ. ರಾಜ್ಯದ ಜನರು ಸಂಕಷ್ಟದಲ್ಲಿದ್ದು ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡದೇ ಬೆಲೆ ಏರಿಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹುಡುಗಾಟ ಆಡುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೂಡಲೇ ಹಾಲಿನ ದರ ಏರಿಕೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಿಜೆಪಿ ರೈತ ಮೋರ್ಚಾ ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶ ರವಾನಿಸಲಾಯಿತು.

ಇದೇ ವೇಳೆ ಧಾರವಾಡ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಯಿತು.