ಎಸ್. ಐ.ಆರ್. ಪ್ರಕ್ರಿಯೆಯಿಂದ ದೇಶಾದ್ಯಂತ ಕೋಟ್ಯಂತರ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ೧.೦೭ ಕೋಟಿ ಹಾಗೂ ಹಾಸನ ಜಿಲ್ಲೆಯಲ್ಲಿ ೧,೬೭,೨೮೫ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಹಾಸನ ವಿಧಾನಸಭಾ ಕ್ಷೇತ್ರವೊಂದರಲ್ಲೇ ೪೭ ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳು ಪಟ್ಟಿಯಿಂದ ನಾಪತ್ತೆಯಾಗಿವೆ ಎಂದು ದೂರಿದರು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಫಾರ್ಮ್-೭ ಅರ್ಜಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಬಡವರು, ದಲಿತರು, ಮುಸ್ಲಿಮರು ಹಾಗೂ ಆದಿವಾಸಿಗಳ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ ಅವರು, ಹಾಸನ ಜಿಲ್ಲೆಯಲ್ಲಿ ೮೦ ಸಾವಿರಕ್ಕೂ ಹೆಚ್ಚು ನಾಗರಿಕರಿಗೆ ನೋಟಿಸ್ ನೀಡಿರುವುದರಿಂದ ಜನರು ಕಚೇರಿಗಳಿಗೆ ಅಲೆಯುವಂತಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿ, ದೋಷಪೂರಿತ ವಿಶೇಷ ತೀವ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ, ಸಿಐಟಿಯು ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, ಎಸ್. ಐ.ಆರ್. ಪ್ರಕ್ರಿಯೆಯಿಂದ ದೇಶಾದ್ಯಂತ ಕೋಟ್ಯಂತರ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ೧.೦೭ ಕೋಟಿ ಹಾಗೂ ಹಾಸನ ಜಿಲ್ಲೆಯಲ್ಲಿ ೧,೬೭,೨೮೫ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಹಾಸನ ವಿಧಾನಸಭಾ ಕ್ಷೇತ್ರವೊಂದರಲ್ಲೇ ೪೭ ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳು ಪಟ್ಟಿಯಿಂದ ನಾಪತ್ತೆಯಾಗಿವೆ ಎಂದು ದೂರಿದರು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಫಾರ್ಮ್-೭ ಅರ್ಜಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಬಡವರು, ದಲಿತರು, ಮುಸ್ಲಿಮರು ಹಾಗೂ ಆದಿವಾಸಿಗಳ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ ಅವರು, ಹಾಸನ ಜಿಲ್ಲೆಯಲ್ಲಿ ೮೦ ಸಾವಿರಕ್ಕೂ ಹೆಚ್ಚು ನಾಗರಿಕರಿಗೆ ನೋಟಿಸ್ ನೀಡಿರುವುದರಿಂದ ಜನರು ಕಚೇರಿಗಳಿಗೆ ಅಲೆಯುವಂತಾಗಿದೆ ಎಂದರು.ಚುನಾವಣಾ ಆಯೋಗವು ಸ್ವತಂತ್ರವಾಗಿ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, SIಖ ಪ್ರಕ್ರಿಯೆ ರದ್ದು, ಮುಖ್ಯ ಚುನಾವಣಾ ಆಯುಕ್ತರ ವಜಾ, ನಕಲಿ ಫಾರ್ಮ್-೭ ಅರ್ಜಿಗಳ ಮೂಲಕ ಮತದಾರರ ಹೆಸರು ಅಳಿಸಲು ಯತ್ನಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಹಾಗೂ ಅಕ್ರಮವಾಗಿ ಕೈಬಿಟ್ಟಿರುವ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವಂತೆ ಆಗ್ರಹಿಸಿದರು.ಇದೇ ವೇಳೆ ಡಿವೈಎಫೈ ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ., ಎಸ್.ಎಪ್.ಐ. ಜಿಲ್ಲಾ ಕಾರ್ಯದರ್ಶಿ ರಮೇಶ್, ಎ.ಐ.ಡಿ.ಎಸ್.ಒ ಜಿಲ್ಲಾಧ್ಯಕ್ಷೆ ಚೈತ್ರಾ ಮಾತನಾಡಿದರು. ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಹಾಗೂ ದಲಿತ ಮುಖಂಡ ಟಿ.ಆರ್. ವಿಜಯ್ ಕುಮಾರ್ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಎ.ಐ.ಡಿ.ಎಸ್.ಒ ಜಿಲ್ಲಾ ಕಾರ್ಯದರ್ಶಿ ಸುಷ್ಮಾ, ಡಿವೈಎಫೈ ಮುಖಂಡರಾದ ಪ್ರದೀಪ್, ಲೋಕೇಶ್, ಮೇಘನಾ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಗತಿಪರರು ಪಾಲ್ಗೊಂಡಿದ್ದರು.