ಬಸವಣ್ಣರ ಸಾಂಸ್ಕೃತಿಕ ನಾಯಕ ಘೋಷಣೆ ಹೆಮ್ಮೆ: ಶಾಸಕ ಸ್ವರೂಪ್ ಪ್ರಕಾಶ್

| Published : Feb 19 2024, 01:30 AM IST

ಬಸವಣ್ಣರ ಸಾಂಸ್ಕೃತಿಕ ನಾಯಕ ಘೋಷಣೆ ಹೆಮ್ಮೆ: ಶಾಸಕ ಸ್ವರೂಪ್ ಪ್ರಕಾಶ್
Share this Article
  • FB
  • TW
  • Linkdin
  • Email

ಸಾರಾಂಶ

ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ. ಹಾಸನದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭಕನ್ನಡಪ್ರಭ ವಾರ್ತೆ ಹಾಸನ

ಬಸವಣ್ಣನವರು ೧೨ ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಸಾರಿದವರು, ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಾಯಕದ ಮಹತ್ವ ಸಮಾಜದಲ್ಲಿ ಸಮಾನತೆ ಮತ್ತು ಜೀವನ ಮಾರ್ಗ ಮಹಿಳಾ ಅಸಮಾನತೆ, ನಡೆ ನುಡಿಗಳಲ್ಲಿ ಭಿನ್ನತೆ ಇರಬಾರದು ಎಂದು ತಿಳಿಸಿಕೊಟ್ಟವರು ಬಸವಣ್ಣನವರು ಎಂದರು.

ವಿಶ್ವಗುರು ಬಸವಣ್ಣನವರು ಸಾಂಸ್ಕೃತಿಕ ನಾಯಕ ಎಂದು ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಪ್ರತಿಯೊಂದು ಸ್ಥಳೀಯ ಸಂಸ್ಥೆಗಳು, ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲಿ ಭಾವ ಚಿತ್ರವನ್ನು ಅನಾವರಣ ಮಾಡಲಾಗಿದೆ. ಬಸವಣ್ಣನವರ ಪ್ರತಿಯೊಂದು ವಿಚಾರವನ್ನು ತಿಳಿದುಕೊಳ್ಳಬೇಕು ಎಂದರು.

ಬಸವಣ್ಣನವರನ್ನು ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಸರ್ಕಾರ ಘೋಷಣೆ ಎಲ್ಲರಿಗೂ ಹೆಮ್ಮೆ, ಅವರ ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸೋಣ. ಹಾಸನ ನಗರದಲ್ಲಿ ಒಂದು ವೃತ್ತವನ್ನು ಗುರುತಿಸಿ ಸಾಂಸ್ಕೃತಿಕ ನಾಯಕರಾದ ಬಸವಣ್ಣ ಅವರ ಹೆಸರಿಟ್ಟು ಅವರ ಪ್ರತಿಮೆ ಅನಾವರಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಸಿ ಸತ್ಯಭಾಮ ಮಾತನಾಡಿ, ಬಸವಣ್ಣನವರು ೧೨ ನೇ ಶತಮಾನದಲ್ಲಿ ಮಾಡಿದ ಸಮಾನತೆಯ ಕ್ರಾಂತಿಯಿಂದ ಕರ್ನಾಟಕ ಬಸವಣ್ಣನವರ ಚಾರಿತ್ರ್ಯವನ್ನು ಕಾಣಬಹುದು, ವಿಶ್ವಗುರು ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಸಾಮಾಜಿಕ ಅರಿವು ಮೂಡಿಸಿ ಸಮಾನತೆ ಬೀಜ ಬಿತ್ತಿದರು ಎಂದು ತಿಳಿಸಿದರು.

ಬಸವಣ್ಣನವರು ಭಕ್ತಿ ಭಂಡಾರಿ, ಜ್ಞಾನಯೋಗಿಯಾಗಿ ಸಮಸಮಾಜದ ನಿರ್ಮಾತೃವಾಗಿ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು, ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ ಮೂಢನಂಬಿಕೆಗಳನ್ನು ವಿರುದ್ದ ಹೋರಾಡಿ ಸಮಾನತೆ ತತ್ವಗಳನ್ನು ಸಾರಿದರು ಎಂದು ಹೇಳಿದರು.

ಇವನಾರವ, ಇವನಾರವ, ಇವನಾರವ ನೆಂದನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನೆಂದನಿಸಯ್ಯಾ ಕೂಡಲಸಂಗಮದೇವಾ, ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.. ಎನ್ನುವಂತಹ ಒಂದು ಮಾನವೀಯ ಮೌಲ್ಯದ ಒಂದು ಸಂದೇಶ ಜಗತ್ತಿಗೆ ಸಾರಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬಸವಣ್ಣನವರು ಒಂದೇ ವರ್ಗಗಕ್ಕೆ ಸೀಮಿತವಾಗಿಲ್ಲ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಈ. ಕೃಷ್ಣೇಗೌಡ, ವೀರಶೈವದ ಮುಖಂಡ ಐಸ್ವಾಮಿ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಚ್.ಪಿ. ತಾರಾನಾಥ್, ವೀರಶೈವ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಹಾಸನದಲ್ಲಿ ಏರ್ಪಡಿಸಿದ್ದ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಬಸವಣ್ಣನ ಭಾವಚಿತ್ರಗಳನ್ನು ಬಿಡುಗಡೆ ಮಾಡಿದರು.