ನಾನೊಬ್ಬ ಕನ್ನಡಿಗನೆಂದು ಹೆಮ್ಮೆಯಿಂದ ಹೇಳಿ

| Published : Mar 03 2024, 01:30 AM IST

ನಾನೊಬ್ಬ ಕನ್ನಡಿಗನೆಂದು ಹೆಮ್ಮೆಯಿಂದ ಹೇಳಿ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಸುಮಾರು ಎರಡುವರೆ ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಗೆ ತನ್ನದೇ ಆದ ವೈಶಿಷ್ಟ್ಯ ಇದ್ದು ಪ್ರತಿಯೊಬ್ಬ ಕನ್ನಡಿಗನು ನಾನೊಬ್ಬ ಕನ್ನಡಿಗ ಎಂದು ಎದೆ ತಟ್ಟಿ ಹೆಮ್ಮೆಯಿಂದ ಹೇಳಬೇಕು ಎಂದು ಸಂಸದ ಬಿ.ಎನ್. ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ಸುಮಾರು ಎರಡುವರೆ ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಗೆ ತನ್ನದೇ ಆದ ವೈಶಿಷ್ಟ್ಯ ಇದ್ದು ಪ್ರತಿಯೊಬ್ಬ ಕನ್ನಡಿಗನು ನಾನೊಬ್ಬ ಕನ್ನಡಿಗ ಎಂದು ಎದೆ ತಟ್ಟಿ ಹೆಮ್ಮೆಯಿಂದ ಹೇಳಬೇಕು ಎಂದು ಸಂಸದ ಬಿ.ಎನ್. ಬಚ್ಚೇಗೌಡ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ನಡೆದ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷರ ಅವಧಿಯಲ್ಲಿ ಕನ್ನಡ ಭಾಷೆ ಹರಿದು ಹಂಚಿಹೋಗಿದ್ದ ಕನ್ನಡ ಭಾಷೆಯನ್ನು ಒಗ್ಗೂಡಿಸುವ ದೃಷ್ಟಿಯಿಂದ 1915ರಲ್ಲಿ ಸಾಹಿತ್ಯ ಸಮ್ಮೇಳನಗಳನ್ನ ಪ್ರಾರಂಭಿಸಲಾಯಿತು. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಮಿತಿಯ ಪೋಷಕರಾಗಿ ಬಿಎಂ ಶ್ರೀಕಂಠಯ್ಯ, ಶ್ರೀನಿವಾಸರಾಯರು, ಸರ್‌.ಎಂ.ವಿಶ್ವೇಶ್ವರಯ್ಯ ಸಮ್ಮೇಳನವನ್ನು ಪ್ರಾರಂಭಿಸಿದರು. ಅಂದಿನಿಂದ ಸಾಹಿತ್ಯ, ಸಂಗೀತ, ಜಾನಪದ ಕಲಾ ಪ್ರಾಕಾರಗಳನ್ನು ಉಳಿಸುವ ದೃಷ್ಟಿಯಿಂದ ನಿರಂತರವಾಗಿ ಸಮ್ಮೇಳನಗಳನ್ನ ರೂಪಿಸಲಾಗುತ್ತಿದೆ. ದೇಶದಲ್ಲಿ ಕನ್ನಡ ಭಾಷೆ ವಿಶೇಷ ಸ್ಥಾನಮಾನ ಹೊಂದಿದೆ. ಆದ್ದರಿಂದ ಪ್ರತಿಯೊಬ್ಬ ಕನ್ನಡಿಗರು ಅಭಿಮಾನದಿಂದ ನಾನೊಬ್ಬ ಕನ್ನಡಿಗನೆಂದು ಎದೆ ತಟ್ಟಿ ಹೇಳಬೇಕು ಎಂದು ಹೇಳಿದರು.

ಶಾಸಕ ಶರತ್ ಬಚ್ಚೇಗೌಡ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಸಾಹಿತ್ಯ ಸಂಸ್ಕೃತಿ ಸಾಂಸ್ಕೃತಿಕ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಾ ಬಂದಿದೆ. ನೆಲ ಜಲ ಭಾಷೆ ವಿಚಾರ ಬಂದಾಗ ಪ್ರತಿಯೊಬ್ಬ ಕನ್ನಡಿಗರು ಒಗ್ಗಟ್ಟಾಗಬೇಕು. ಕನ್ನಡಕ್ಕಾಗಿ ಅವಿರತ ದುಡಿದ ಹಲವಾರು ಪ್ರಾತಃಸ್ಮರಣೀಯರು ಇದ್ದು ಅವರಿಗೆ ಗೌರವ ಸಮರ್ಪಿಸಬೇಕು. ಅಷ್ಟೇ ಅಲ್ಲದೆ ಸಮ್ಮೇಳನಗಳು ಹಬ್ಬದ ರೀತಿಯಲ್ಲಿ ನಡೆಯಬೇಕು ಎಂದರು.

ಕಸಾಪ ಜಿಲ್ಲಾಧ್ಯಕ್ಷ ಪ್ರೊ.ಕೃಷ್ಣಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಸರ್ಕಾರದ ಪ್ರಾತಿನಿಧಿಕ ಸಂಸ್ಥೆಯಾಗಿದ್ದು ಕನ್ನಡ ಭಾಷೆಗೆ ಕದಂಬರು, ಗಂಗರು, ರಾಷ್ಟ್ರಕೂಟರು, ಚೋಳರು, ಪಾಳೆಗಾರರು ಸೇರಿದಂತೆ ಹಲವಾರು ರಾಜ ಮನೆತನದವರು ಹೋರಾಟಗಾರರು, ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆದ್ದರಿಂದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಪ್ರತಿಯೊಬ್ಬ ಕನ್ನಡಿಗನ ಮೇಲೆ ತನ್ನದೇ ಆದ ಜವಾಬ್ದಾರಿ ಇದ್ದು ಕನ್ನಡ ಶಾಲೆ ಉಳಿಸಿ, ಕನ್ನಡ ಬಳಸಿ ಎಂದರು.

ಸಮಾರಂಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಹೆಚ್.ಎಂ. ಮುನಿರಾಜು, ತಹಸೀಲ್ದಾರ್ ವಿಜಯ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಗೋಪಾಲಗೌಡ, ಕನ್ನಡ ಕಾರ್ಮಿಕರ ಹೋರಾಟ ವೇದಿಕೆ ಮಾಜಿ ಅಧ್ಯಕ್ಷ ಹುಲ್ಲೂರು ರಾಜಗೋಪಾಲ್, ಸಮಾಜ ಸೇವಕ ಡಾ.ಹೆಚ್.ಎಂ.ಸುಬ್ಬರಾಜು ಇತರರಿದ್ದರು.(ಒಂದು ಚೆನ್ನಾಗಿರುವ ಫೋಟೋ ಮಾತ್ರ ಬಳಸಿ)

ಫೋಟೋ : 2 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕು ಕಚೇರಿ ಆವರಣದಲ್ಲಿ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಸದ ಬಚ್ಚೇಗೌಡ, ಸಮ್ಮೇಳನಾಧ್ಯಕ್ಷ ದೊಡ್ಡಹುಲ್ಲೂರು ರೂಕ್ಕೋಜಿ ಇತರರು ಉದ್ಘಾಟಿಸಿದರು.