ಸಾರಾಂಶ
ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರು. ಅನುದಾನ ನೀಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ಎಚ್. ವೇಣುಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಮಂತ್ರಿಗೆ ಮನವಿ ಪತ್ರ ಹಸ್ತಾಂತರಿಸಿದ ಬಳಿಕ ಸಿಎಂ ವಿಷಯವನ್ನು ಸ್ಪಂದಿಸುವ ಭರವಸೆ ನೀಡಿದರು.
ಹಾಸನ: ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರು. ಅನುದಾನ ನೀಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ಎಚ್. ವೇಣುಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.
ಪತ್ರಕರ್ತರ ತುರ್ತು ಸಮಯದಲ್ಲಿ ಅವಶ್ಯಕವಾಗಿ ಬೇಕಾಗಿರುವ ಕ್ಷೇಮಾಭಿವೃದ್ಧಿ ನಿದಿಗೆ ಮುಖ್ಯಮಂತ್ರಿಗಳು ತಮ್ಮ ಪರಿಹಾರ ನಿಧಿಯಿಂದ ೨೫ ಲಕ್ಷ ರು. ಅನುದಾನ ನೀಡಬೇಕು. ಈ ವೇಳೆ ಹಿರಿಯ ಪತ್ರಕರ್ತೆ ಹಾಗೂ ಹಾಸನವಾಣಿ ದಿನಪತ್ರಿಕೆಯ ಸಂಪಾದಕರಾದ ಲೀಲಾವತಿಯವರನ್ನು ಈ ವರ್ಷದ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವಂತೆ ಕೂಡ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಮಂತ್ರಿಗೆ ಮನವಿ ಪತ್ರ ಹಸ್ತಾಂತರಿಸಿದ ಬಳಿಕ ಸಿಎಂ ವಿಷಯವನ್ನು ಸ್ಪಂದಿಸುವ ಭರವಸೆ ನೀಡಿದರು.