ಯುವ ಬರಹಗಾರರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಹಿರಿಯ ಸಾಹಿತಿಗಳನ್ನು ಗುರುತಿಸಿ ವಿಶೇಷ ಸಮ್ಮೇಳನ ಆಯೋಜಿಸುವ ಉದ್ದೇಶವಿದೆ ಎಂದರು. ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ ನಡೆಸುವುದರೊಂದಿಗೆ, ಹೋಬಳಿ ಕೇಂದ್ರಗಳಲ್ಲಿನ ಶಾಲೆಗಳಲ್ಲಿ ಸಾಹಿತ್ಯ ಚಟುವಟಿಕೆ ಹಾಗೂ ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲಾಗುವುದು. ತಾಲೂಕು ಕೇಂದ್ರಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣಕ್ಕೂ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳವರೆಗೆ ವಿಸ್ತರಿಸುವುದರೊಂದಿಗೆ, ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಬೇಕು ಎಂದು ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಹೇಳಿದರು.ನಗರದ ರೋಟರಿ ಸಮುದಾಯ ಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪರಿಷತ್ತಿನ ಚಟುವಟಿಕೆಗಳನ್ನು ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ತಲುಪಿಸಲಾಗುವುದು. ಯುವ ಬರಹಗಾರರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಹಿರಿಯ ಸಾಹಿತಿಗಳನ್ನು ಗುರುತಿಸಿ ವಿಶೇಷ ಸಮ್ಮೇಳನ ಆಯೋಜಿಸುವ ಉದ್ದೇಶವಿದೆ ಎಂದರು. ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ ನಡೆಸುವುದರೊಂದಿಗೆ, ಹೋಬಳಿ ಕೇಂದ್ರಗಳಲ್ಲಿನ ಶಾಲೆಗಳಲ್ಲಿ ಸಾಹಿತ್ಯ ಚಟುವಟಿಕೆ ಹಾಗೂ ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲಾಗುವುದು. ತಾಲೂಕು ಕೇಂದ್ರಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣಕ್ಕೂ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ರಾಜ್ಯದಲ್ಲೇ ಮಾದರಿಯಾಗಿ ರೂಪಿಸುವ ಗುರಿ ಹೊಂದಿದ್ದು, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸಲಾಗುವುದು ಎಂದರು.ಸಭೆಯಲ್ಲಿ ಜಾವಗಲ್ ಪ್ರಸನ್ನ ಕುಮಾರ್, ಕಲ್ಯಾಣ ಕುಮಾರ್, ಬಸವರಾಜ್ ಬಾಣವರ, ಬಿ. ರವಿಶಂಕರ್, ಹೇಮಂತ್ ಕುಮಾರ್, ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.