ನಾನು ಶಾಸಕನಾದ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎತ್ತಿನಹೊಳೆ ಯೋಜನೆಯಡಿ 500 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ. ಅದರ ಫಲವಾಗಿ ಈಗ 72 ಕೋಟಿ ರು. ಬಿಡುಗಡೆಯಾಗಿದೆ. ಎತ್ತಿನಹೊಳೆ ಯೋಜನೆಯಿಂದ ತಾಲೂಕಿನ ಪರಿಸರಕ್ಕೆ ಅಪಾರ ಹಾನಿಯಾಗಿದ್ದರೂ, ನಮ್ಮ ಕ್ಷೇತ್ರದ ಜನತೆ ಬಯಲುಸೀಮೆ ಜಿಲ್ಲೆಗಳ ಜನರಿಗಾಗಿ ಕುಡಿಯುವ ನೀರನ್ನು ಬಿಟ್ಟುಕೊಟ್ಟಿದ್ದಾರೆ. ಈ ಯೋಜನೆಯಿಂದ ಏಳು ಜಿಲ್ಲೆಗಳ ಸುಮಾರು 70 ಲಕ್ಷ ಜನರಿಗೆ ಲಾಭವಾಗಲಿದೆ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಸಕಲೇಶಪುರಮಲೆನಾಡು ಭಾಗದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಅನ್ನು ನೀಡಬೇಕು ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.ತಾಲೂಕಿನ ಹಾನುಬಾಳು ಮುಖ್ಯ ರಸ್ತೆಯಿಂದ (ವೆಂಕಟಹಳ್ಳಿ) ಜಂಬರಡಿ ರಾಗಿಗುಂಡಿಗೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆಯನ್ನು 2 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇಂದು ಈ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುತ್ತಿರುವುದು ಸಂತಸದ ವಿಷಯ ಎಂದರು.ನಾನು ಶಾಸಕನಾದ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎತ್ತಿನಹೊಳೆ ಯೋಜನೆಯಡಿ 500 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ. ಅದರ ಫಲವಾಗಿ ಈಗ 72 ಕೋಟಿ ರು. ಬಿಡುಗಡೆಯಾಗಿದೆ. ಎತ್ತಿನಹೊಳೆ ಯೋಜನೆಯಿಂದ ತಾಲೂಕಿನ ಪರಿಸರಕ್ಕೆ ಅಪಾರ ಹಾನಿಯಾಗಿದ್ದರೂ, ನಮ್ಮ ಕ್ಷೇತ್ರದ ಜನತೆ ಬಯಲುಸೀಮೆ ಜಿಲ್ಲೆಗಳ ಜನರಿಗಾಗಿ ಕುಡಿಯುವ ನೀರನ್ನು ಬಿಟ್ಟುಕೊಟ್ಟಿದ್ದಾರೆ. ಈ ಯೋಜನೆಯಿಂದ ಏಳು ಜಿಲ್ಲೆಗಳ ಸುಮಾರು 70 ಲಕ್ಷ ಜನರಿಗೆ ಲಾಭವಾಗಲಿದೆ ಎಂದು ಹೇಳಿದರು.ಹಾನುಬಾಳು ಜಿಪಂ ವ್ಯಾಪ್ತಿಯ ಕ್ಯಾಮನಹಳ್ಳಿ, ದೇವಲದಕೆರೆ, ಹಾನುಬಾಳು ಹಾಗೂ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅಧಿಕಾರ ಸಿಕ್ಕಾಗ ನಿಷ್ಠೆಯಿಂದ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ. ಕ್ಷೇತ್ರದ ಸರ್ವತೋಮುಖ ಏಳಿಗೆಗಾಗಿ ನಾನು ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕ್ಯಾಮನಹಳ್ಳಿ ರಾಜ್‌ಕುಮಾರ್, ಜಂಬರಡಿ ಲೋಹಿತ್, ಅಗ್ನಿ ಸೋಮಶೇಖರ್, ಗುತ್ತಿಗೆದಾರ ರಾಜೀವ್ ಸೇರಿದಂತೆ ಅನೇಕ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.