ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಮನವಿ ಮಾಡಿದರು.
ಯಲಬುರ್ಗಾ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಮನವಿ ಮಾಡಿದರು.
ಪಟ್ಟಣದ ಮಂಜುನಾಥ ಶಾಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಶರಣಪ್ಪ ಮಟ್ಟೂರು ವಿಚಾರವಂತರಾಗಿದ್ದು, ಶಿಕ್ಷಕರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಶಿಕ್ಷಕರ ಪರವಾಗಿ ಹೋರಾಟ ನಡೆಸಿ, ಅವರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ಈ ಬಾರಿ ಶಿಕ್ಷಕರು ಅವರಿಗೆ ಬೆಂಬಲ ನೀಡಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ ಮೂಲಕ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದರು.ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಮಹತ್ವದ್ದಾಗಿದೆ. ದೇಶದ ಶೈಕ್ಷಣಿಕ ಪ್ರಗತಿಯಲ್ಲಿ ಕಾಂಗ್ರೆಸ್ನ ಸೇವೆ ದೊಡ್ಡದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶೈಕ್ಷಣಿಕ ಪ್ರಗತಿಗೆ ನಿರೀಕ್ಷಿತ ಕೊಡುಗೆ ನೀಡಿಲ್ಲ. ಜಾತಿ, ಧರ್ಮ ಹಾಗೂ ದ್ವೇಷದ ರಾಜಕಾರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಶಿಕ್ಷಕರು ಹಾಗೂ ನೌಕರರ ಹಿತಾಸಕ್ತಿಗಾಗಿ ಕಾಂಗ್ರೆಸ್ ಸರ್ಕಾರ ಹಲವು ಕಾರ್ಯಗಳನ್ನು ಕೈಗೊಂಡಿದೆ. ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದ ಶರಣಪ್ಪ ಮಟ್ಟೂರು ಶಿಕ್ಷಕರ ಪರವಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂದರು.ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು, ಮಾಜಿ ಸಂಸದ ಸಂಗಣ್ಣ ಕರಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಮಲ್ಲಿಕಾರ್ಜುನ ನಾಗಪ್ಪ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಹನುಮಂತಗೌಡ ಚೆಂಡೂರು, ಯಂಕಣ್ಣ ಯರಾಶಿ, ಶೇಖರಗೌಡ ಉಳ್ಳಾಗಡ್ಡಿ, ಮಹೇಶ ಹಳ್ಳಿ, ಸುಧೀರ ಕೊರ್ಲಹಳ್ಳಿ, ಡಾ. ಶಿವನಗೌಡ ದಾನರಡ್ಡಿ, ರೇವಣಪ್ಪ ಸಂಗಟಿ, ಅಶೋಕ ತೋಟದ, ಹನುಮೇಶ ಕಡೆಮನಿ, ಆನಂದ ಉಳ್ಳಾಗಡ್ಡಿ, ಈರಪ್ಪ ಕುಡಗುಂಟಿ, ವಿ.ಎಸ್. ಬೆಣಕಲ್, ಹುಲಗಪ್ಪ ಬಂಡಿವಡ್ಡರ್ ಇದ್ದರು.