ಜನರಿಗೆ ಮೂಲಭೂತ ಸವಲತ್ತು ಕಲ್ಪಿಸಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

| Published : Jul 29 2024, 12:50 AM IST / Updated: Jul 29 2024, 12:51 AM IST

ಜನರಿಗೆ ಮೂಲಭೂತ ಸವಲತ್ತು ಕಲ್ಪಿಸಿ: ಸಚಿವ ಡಾ.ಶರಣಪ್ರಕಾಶ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ. ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚು ಜನರು ವಾಸವಿರುವ ಕಡೆ ಕುಡಿಯುವ ನೀರು ಹಾಗೂ ಲೈಟ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಇಲ್ಲಿನ ನಗರಸಭೆ ವ್ಯಾಪ್ತಿಯ ನಿವಾಸಿಗಳಿಗೆ ಅಗತ್ಯವಾದ ಕುಡಿಯುವ ನೀರು, ಸ್ವಚ್ಛತೆ ಹಾಗೂ ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಮೂಲಭೂತ ಸವಲತ್ತುಗಳನ್ನು ಕಲ್ಪಿಸಿಕೊಡುವುದರ ಕಡೆಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ನಡೆದ ರಾಯಚೂರು ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚು ಜನರು ವಾಸವಿರುವ ಕಡೆ ಕುಡಿಯುವ ನೀರು ಹಾಗೂ ಲೈಟ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. 24 ಘಂಟೆಯು ಕುಡಿಯುವ ನೀರು ಯೋಜನೆಯಡಿ ನಿರಂತರ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಿಬೇಕು. ಅಲ್ಲದೆ ದಿನಾಲು ಕುಡಿಯುವ ನೀರು ಪೂರೈಕೆಗಾಗಿ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿ ರಾಯಚೂರು ನಗರಕ್ಕೆ ನೀರು ಪೂರೈಸಲು ಅಧಿಕಾರಿಗಳು ಶ್ರಮಿಸಬೇಕೆಂದರು.

ರಾಯಚೂರು ನಗರದ ಎಲ್ಲಾ ರಸ್ತೆಗಳ ರಿಪೇರಿ ಸೇರಿದಂತೆ ಇತರೆ ಸಣ್ಣಪುಟ್ಟ ಕಾಮಗಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಬೇಕು. ಅಲ್ಲದೆ ನಗರದ ಡ್ಯಾಡಿ ಕಾಲೋನಿಯಿಂದ ನೂತನ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಮಾರ್ಗವನ್ನು ಕೂಡಲೇ ದುರಸ್ತಿ ಮಾಡಬೇಕು. ಅದೇ ರೀತಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ವಿರುದ್ಧ ಸೂಕ್ತ ಕ್ರಮಕೈಗೊಂಡು ತೆರುಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ವಾರ್ಡ್‌ ನಂ-21ರ ದೇವಿ ನಗರದಲ್ಲಿ ಮೆಲರೋಸ್ ಶಾಲೆ ಹಿಂದುಗಡ ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿಯು ಟೆಂಡರ್ ಆಹ್ವಾನ ಮಾಡಲಾಗಿದೆ. ನಗರದ ವಾರ್ಡ ನಂ-21ರ ದೇವಿ ನಗರದ ಎನ್.ಜಿ.ಓ ಕಾಲೋನಿಯ ದೊಡ್ಡ ಪಾಗುಂಟಿ ಮನೆಯ ಹತ್ತಿರ ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿಯು ಟೆಂಡರ್ ಆಹ್ವಾನ ಮಾಡಲಾಗಿದೆ. ವಾರ್ಡ್‌ ನಂ-02ರ ಜನತಾ ಕಾಲೋನಿಯ ಡಿಶ್ ನಾಗರಾಜ ಮನೆಯ ಹತ್ತಿರ ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ. ನಗರದ ವಾರ್ಡ್‌ ನಂ-28 ರ (ಹಳೆ) ಆಶ್ರಯಾ ಕಾಲೋನಿ-1ರಲ್ಲಿ ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ ಎಂದರು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಸಚಿವರು, ಶಾಸಕರು, ಎಂಎಲ್ಸಿ, ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.28ಕೆಪಿಆರ್‌ಸಿಆರ್‌ 06ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅಧ್ಯಕ್ಷತೆಯಲ್ಲಿ ನಗರಸಭೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.