ವಿದ್ಯಾರ್ಥಿಗಳಿಗೆ ತಪ್ಪದೇ ಸೌಲಭ್ಯ ತಲುಪಿಸಿ

| Published : Dec 18 2024, 12:48 AM IST

ಸಾರಾಂಶ

ವಿದ್ಯಾರ್ಥಿಗಳಿಗೆ ಸರ್ಕಾರಿ ಕೊಡ ಮಾಡುವ ಎಲ್ಲ ಸೌಲಭ್ಯ ತಪ್ಪದೇ ತಲುಪಿಸುವ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು

ಲಕ್ಷ್ಮೇಶ್ವರ: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳಿಗೆ ಸರ್ಕಾರ ಕೊಡ ಮಾಡಿರುವ ಎಲ್ಲ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ತಲುಪಿಸುವ ಮೂಲಕ ಅವರು ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಕಾರ್ಯವಾಗಬೇಕು ಎಂದು ಬಿಇಓ ಎಚ್.ಎನ್. ನಾಯ್ಕ್ ಹೇಳಿದರು.

ಮಂಗಳವಾರ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಭವನದಲ್ಲಿ ಜರುಗಿದ ಲಕ್ಷ್ಮೇಶ್ವರ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಕಡೆಗೆ ನಮ್ಮೆಲ್ಲರ ಕಾರ್ಯಗಳು ಇರಬೇಕು. ವಿದ್ಯಾರ್ಥಿಗಳಿಗೆ ಸರ್ಕಾರಿ ಕೊಡ ಮಾಡುವ ಎಲ್ಲ ಸೌಲಭ್ಯ ತಪ್ಪದೇ ತಲುಪಿಸುವ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಶಿಕ್ಷಕರ ವೃತ್ತಿಗೆ ಗೌರವ ತರುವ ರೀತಿಯಲ್ಲಿ ನಾವೆಲ್ಲ ಕೆಲಸ ಮಾಡಿ ಇಲಾಖೆಗೆ ಉತ್ತಮ ಹೆಸರು ತರುವ ಕಾರ್ಯವಾಗಲಿ ಎಂದು ಹೇಳಿದರು.

ಈ ಸಭೆಯಲ್ಲಿ ಇಸಿಓ ಹಾಗೂ ಬಿ ಆರ್ ಪಿಗಳು ಇಲಾಖೆಗೆ ಸಂಬಂಧಪಟ್ಟ ಹಲವು ವಿಷಯ ಆಧಾರ ತಿದ್ದುಪಡಿ, ಅಪಾರ ನೋಂದಣಿ ಹಾಗೂ ಶೈಕ್ಷಣಿಕ ಚಟುವಟಿಕೆ ಹಾಗೂ ಅನುಷ್ಠಾನ ಮಾಡುವ ಬಗೆಯ ಕುರಿತು ಮಾರ್ಗದರ್ಶನ ಮಾಡಿದರು.

ಈ ವೇಳೆ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ.ಎಸ್.ಹಿರೇಮಠ, ಕಾರ್ಯದರ್ಶಿ ಚಂದ್ರಕಾಂತ ನೇಕಾರ, ಎಲ್.ಎ. ನಂದೆಣ್ಣವರ, ಬಿ.ಬಿ. ಯತ್ನಳ್ಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಎಂ.ಡಿ.ವಾರದ, ನಿರ್ದೇಶಕ ಬಿ.ಎಂ.ಯರಗುಪ್ಪಿ, ಐ.ಎಸ್. ಮೆಡ್ಲೇರಿ, ಉಮೇಶ ಹುಚ್ಚಯ್ಯಮಠ, ಹರೀಶ್ ಸೇಂದ್ರಗಯಾ, ಐ.ಬಿ. ಜಕ್ಕನಗೌಡರ, ನಿಕಟ ಪೂರ್ವ ಅಧ್ಯಕ್ಷ ಡಿ.ಎಚ್.ಪಾಟೀಲ, ಲಕ್ಷ್ಮೇಶ್ವರ ತಾಲ್ಲೂಕಿನ ಸಿ.ಆರ್.ಪಿ, ಬಿ.ಆರ್.ಪಿ, ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.