ಗಡಿಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ

| Published : Feb 12 2025, 12:31 AM IST

ಸಾರಾಂಶ

Provide more funding for the development of government schools on the border.

-ಕಾಂಗ್ರೆಸ್ ಯುವ ಮುಖಂಡ ನಿಜಗುಣ ದೋರನಹಳ್ಳಿ ಒತ್ತಾಯ

--

ಕನ್ನಡಪ್ರಭ ವಾರ್ತೆ ಯಾದಗಿರಿ

ನಗರಕ್ಕೆ ಆಗಮಿಸಿದ್ದ ಕರ್ನಾಟಕ ಸರ್ಕಾರದ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರನ್ನು ಕಾಂಗ್ರೆಸ್ ಯುವ ಮುಖಂಡ ನಿಜಗುಣ ದೋರನಹಳ್ಳಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸನ್ಮಾನಿಸಿ, ಗಡಿಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ದೋರನಹಳ್ಳಿ ಗ್ರಾಮ ಜಿಲ್ಲೆಯಲ್ಲಿ ಅತಿ ದೊಡ್ಡ ಗ್ರಾಮವಾಗಿದ್ದು, ಈ ಗ್ರಾಮದಲ್ಲಿ 5 ಹಿರಿಯ ಪ್ರಾಥಮಿಕ ಶಾಲೆ ಮತ್ತು ಒಂದು ಸರ್ಕಾರಿ ಪ್ರೌಢ ಶಾಲೆ ಇದ್ದು, ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಆದ್ಯತೆ ನೀಡಿ ಅನುದಾನ ಒದಗಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸಬೇಕೆಂದು ಮನವಿ ಮಾಡಿದರು.

ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಗಡಿಭಾಗದ ಕನ್ನಡ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು. ಜಿಲ್ಲೆಯ ಅಭಿವೃದ್ಧಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿವೆ. ನಮ್ಮ ಭಾಗ ಹಿಂದುಳಿದ ಪ್ರದೇಶ ಕಲ್ಯಾಣ ಕರ್ನಾಟಕಕ್ಕೆ ಒಳಗೊಂಡಿದ್ದು, ಅದಕ್ಕಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚಿನ ಅನುದಾನವನ್ನು ನೀಡಿ ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಈಟೆ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಚಮರೆಡ್ಡಿ, ಕಾಂಗ್ರೆಸ್ ಯುವ ಮುಖಂಡರಾದ ಶ್ರೀನಾಥ ಗಣೇರ, ಖಾಜಾ ಪಟೇಲ, ಆರಿಫ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

---

ಫೋಟೊ: ಯಾದಗಿರಿ ನಗರಕ್ಕೆ ಆಗಮಿಸಿದ್ದ ಕರ್ನಾಟಕ ಸರ್ಕಾರದ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರನ್ನು ಕಾಂಗ್ರೆಸ್ ಯುವ ಮುಖಂಡ ನಿಜಗುಣ ದೋರನಹಳ್ಳಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸನ್ಮಾನಿಸಿದರು.

11ವೈಡಿಆರ್6: