ಕನ್ನಡಪ್ರಭ ವಾರ್ತೆ ಚನ್ನಗಿರಿ
ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಫಿಸಿಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು ಅದರಂತೆ ಚನ್ನಗಿರಿ ಪಟ್ಟಣಕ್ಕೆ ಸುಧಾರಿತ ನೀರು ಸರಬರಾಜು ವ್ಯವಸ್ಥೆ ಕಲ್ಫಿಸುವ 11 ಕೋಟಿ ರು.ವೆಚ್ಚದ ಕಾಮಗಾರಿ ಕೆಲಸಕ್ಕೆ ಈ ದಿನ ಭೂಮಿಪೂಜೆಯನ್ನು ನಡೆಸಲಾಗುತ್ತಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಆವರಣದಲ್ಲಿ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಚನ್ನಗಿರಿ ಪಟ್ಟಣಕ್ಕೆ ಸುಧಾರಿತ ನೀರು ಸರಬರಾಜು ವ್ಯವಸ್ಥೆ ಕಲ್ಫಿಸುವ ಕಾಮಗಾರಿ ಕೆಲಸಕ್ಕೆ ಗುದ್ದಲಿಪೂಜೆಯನ್ನು ನೆರವೇರಿಸಿ ಮಾತನಾಡಿ, ಪ್ರತಿವರ್ಷ ಸಂಸತ್ ಸದಸ್ಯರಿಗೆ 5ಕೋಟಿ ಅನುಧಾನ ಬರಲಿದ್ದು ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8ವಿಧಾನಸಭಾ ಕ್ಷೇತ್ರಗಳಿಗೂ ಅಧ್ಯತೆಯ ಮೇರೆಗೆ ಅನುಧಾನವನ್ನು ಹಂಚಿಕೆ ಮಾಡಿಕೊಡಲಾಗುತ್ತಿದೆ ಎಂದರು.
ಚನ್ನಗಿರಿ ಕ್ಷೇತ್ರದಲ್ಲಿ 3ಶಾಲಾ ಕೊಠಡಿಗಳ ನಿರ್ಮಾಣಕ್ಕೆ, ಸಂತೆಬೆನ್ನೂರು ಗ್ರಾಮದಲ್ಲಿ ಸ್ತ್ರೀ ಶಕ್ತಿ ಭವನ ನಿರ್ಮಾಣಕ್ಕೆ ಅನುಧಾನ ನೀಡಿರುವುದಾಗಿ ತಿಳಿಸಿದರು.ಕ್ಷೇತ್ರದ ಶಾಸಕ ಬಸವರಾಜು ವಿ.ಶಿವಗಂಗಾ, ಪುರಸಭೆಯ ಮುಖ್ಯಾಧಿಕಾರಿ ಜೆ.ವಿ.ಮಂಜುನಾಥ್, ಮಾಜಿ ಸದಸ್ಯ ಜಿ.ನಿಂಗಪ್ಪ, ಪಿ.ಆರ್.ಮಂಜುನಾಥ್, ಗೌಸ್ ಪೀರ್, ಗೌಡ್ರು ನಟರಾಜ್, ಜಿತೇಂದ್ರರಾಜ್, ತಾಪಂ ಮಾಜಿ ಸದಸ್ಯ ಜಗದೀಶ್ ಇತರರು ಹಾಜರಿದ್ದರು.