ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ನೀಡುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನವನ್ನು ಆಯೋಜನೆ ಮಾಡಲಾಗಿದೆ ಎಂದು ತಹಸೀಲ್ದಾರ್‌ ಮಂಜುನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ನೀಡುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನವನ್ನು ಆಯೋಜನೆ ಮಾಡಲಾಗಿದೆ ಎಂದು ತಹಸೀಲ್ದಾರ್‌ ಮಂಜುನಾಥ್ ಹೇಳಿದರು.

ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ತಾಲೂಕು ಆಡಳಿತದ ವತಿಯಿಂದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ಪ್ರತಿನಿತ್ಯ ತಾಲೂಕು ಮಟ್ಟದ ಅಧಿಕಾರಿಗಳನ್ನು ಬೇಟಿ ಮಾಡಲು ತಮ್ಮ ಕೆಲಸಗಳನ್ನ ಬಿಟ್ಟು ಕಚೇರಿಗಳನ್ನು ಅಲೆಯಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ, ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.ಗ್ಯಾರಂಟಿ ಸಮಿತಿ ಅಧ್ಯಕ್ಷ ವೆಂಕಟೇಶ್‌ಮೂರ್ತಿ , ಇಒ ಅಪೂರ್ವ, ಪಿಎಸೈ ತೀರ್ಥೇಶ್, ಬೆಸ್ಕಾಂ ಎಇಇ ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಶ್ವಥ್‌ನಾರಾಯಣ್, ಹೊಳವಹಳ್ಳಿ ಜಯರಾಮು, ಅಧಿಕಾರಿಗಳಾದ ವೆಂಕಟೇಶ್, ವೆಂಕಟರಂಗನ್, ಮಂಜುನಾಥ್, ಗ್ರಾಪಂ ಪಿಡಿಒ ಸಿದ್ದರಾಮಯ್ಯ, ಆರ್.ಐ. ಪ್ರತಾಪ್, ಬಸವರಾಜು, ಸಲ್ಮಾನ್, ಭರತ್‌ಕುಮಾರ್, ಪರುಶುರಾಮ್, ಕವಿತಾ, ರಾಕೇಶ್, ಕೋಮಲಾ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.