ಗುಡಿಸಲು ಸುಟ್ಟ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ

| Published : Apr 29 2024, 01:43 AM IST

ಗುಡಿಸಲು ಸುಟ್ಟ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿಂಪುಗಾನಹಳ್ಳಿ ಗ್ರಾಮದಲ್ಲಿ 10 ಗುಡಿಸಲು ಸುಟ್ಟ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾದ ಘಟನೆಯನ್ನು ಬಹಳ ಬೇಸರವಾಯಿತು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಚಿಂಪುಗಾನಹಳ್ಳಿ ಗ್ರಾಮದಲ್ಲಿ 10 ಗುಡಿಸಲು ಸುಟ್ಟ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾದ ಘಟನೆಯನ್ನು ಬಹಳ ಬೇಸರವಾಯಿತು. ಕೂಡಲೇ ಜಿಲ್ಲಾಧಿಕಾರಿ, ಗೃಹ ಸಚಿವರು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಎಲೆರಾಂಪುರ ಕುಂಚಿಟಿಗ ಮಠದ ಪೀಠಾಧ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು.

ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಬಿದ್ದ ಕಾರಣದಿಂದಾಗಿ 10ಕ್ಕೂ ಹೆಚ್ಚು ಗುಡಿಸಲು ಸುಟ್ಟು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಸಂತ್ರಸ್ತರಿಗೆ ಚಾಪೆ, ಬಟ್ಟೆ, ಪುಸ್ತಕ, ಆಹಾರ ಧಾನ್ಯ ವಿತರಿಸಲಾಗಿದೆ. ಈ ಗ್ರಾಮದ ಗ್ರಾಪಂ ಸದಸ್ಯ ಸಂಬಂಧಿಸಿದ ಅಧಿಕಾರಿ ಜೊತೆ ಚರ್ಚಿಸಿ ನಿವೇಶನ ಸಹಿತ ಬಡವರಿಗೆ ಸೂರು ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡುವಂತೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದರು.