ಸಾರ್ವಜನಿಕರು ಹಾಗೂ ಪೌರಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ್ದಾರೆ.
- ಸಾರ್ವಜನಿಕರು, ಗೂ ಪೌರಕಾರ್ಮಿಕರೊಂದಿಗೆ ಸಂವಾದ ।
- ಅಧಿಕಾರಿಗಳಿಗೆ ಸ್ಥಳದಲ್ಲೇ ದೂರವಾಣಿಯಲ್ಲಿ ನಿರ್ದೇಶನ- - -
ಕನ್ನಡಪ್ರಭ ವಾರ್ತೆ ದಾವಣಗೆರೆಸಾರ್ವಜನಿಕರು ಹಾಗೂ ಪೌರಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ನಗರದ ತಮ್ಮ ನಿವಾಸದಲ್ಲಿ ಬುಧವಾರ ಸಾರ್ವಜನಿಕರು ಹಾಗೂ ಪೌರಕಾರ್ಮಿಕರನ್ನು ಭೇಟಿಯಾದ ಸಚಿವರು, ಅವರ ವೈಯಕ್ತಿಕ ಹಾಗೂ ಸಮುದಾಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಕುಂದುಕೊರತೆಗಳನ್ನು ತಾಳ್ಮೆಯಿಂದ ಆಲಿಸಿದರು. ಪೌರಕಾರ್ಮಿಕರು ತಮ್ಮ ಕೆಲಸದ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಇತರ ಬೇಡಿಕೆಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು.ಈ ಸಂದರ್ಭ ಸಾರ್ವಜನಿಕರು ಸಲ್ಲಿಸಿದ ಮನವಿಗಳನ್ನು ಪರಿಶೀಲಿಸಿದ ಸಚಿವರು, ಕೆಲವು ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸ್ಥಳದಲ್ಲೇ ದೂರವಾಣಿ ಕರೆ ಮಾಡಿ ಚರ್ಚಿಸಿದರು. ಸಮಸ್ಯೆಗಳ ಸ್ವರೂಪ ಹಾಗೂ ಅವುಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ವಿಳಂಬ ಮಾಡದೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ, ಪಹಣಿ ತಿದ್ದುಪಡಿ, ಇ-ಸ್ವತ್ತು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಇಟ್ಟುಕೊಂಡು ಬಂದಿದ್ದ ಗ್ರಾಮೀಣ ಪ್ರದೇಶಗಳ ಜನರ ಅಹವಾಲು ಆಲಿಸಿ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೆಲವುಗಳಿಗೆ ಪರಿಹಾರ ನೀಡಿದರೆ, ಇನ್ನು ಕೆಲವು ಸಮಸ್ಯೆಗಳಿಗೆ ವಿಳಂಬ ಮಾಡದೆ ಪರಿಹಾರ ನೀಡುವಂತೆ ಸೂಚನೆ ನೀಡಿದರು.- - -
-4ಕೆಡಿವಿಜಿ32, 33: ದಾವಣಗೆರೆಯ ತಮ್ಮ ನಿವಾಸದಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಅವರು ಸಾರ್ವಜನಿಕರು ಹಾಗೂ ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.