ರಾಮನಗರ: ಮಹಾಶಿವರಾತ್ರಿ ಪ್ರಯುಕ್ತ ಈ ಬಾರಿಯೂ ಲಕ್ಷಾಂತರ ಭಕ್ತರು ಕಾಲ್ನಡಿಗೆಯಲ್ಲಿ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮಾರ್ಗ ಮಧ್ಯೆ ಅವಘಡಗಳು ಸಂಭವಿಸುವುದನ್ನು ತಡೆಯುವ ಸಲುವಾಗಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ

ರಾಮನಗರ: ಮಹಾಶಿವರಾತ್ರಿ ಪ್ರಯುಕ್ತ ಈ ಬಾರಿಯೂ ಲಕ್ಷಾಂತರ ಭಕ್ತರು ಕಾಲ್ನಡಿಗೆಯಲ್ಲಿ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮಾರ್ಗ ಮಧ್ಯೆ ಅವಘಡಗಳು ಸಂಭವಿಸುವುದನ್ನು ತಡೆಯುವ ಸಲುವಾಗಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ.

ಮೂರು ವರ್ಷಗಳ ಹಿಂದೆ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರು ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ದುರ್ಘಟನೆ ಸಂಭವಿಸಿತ್ತು. ಈ ಘಟನೆ ಮಾಸುವ ಮುನ್ನವೇ ಹನೂರಿನಲ್ಲಿ ಭಕ್ತನೊಬ್ಬನ ಮೇಲೆ ಚಿರತೆ ದಾಳಿ ಮಾಡಿರುವುದು ಕಾಲ್ನಡಿಗೆಯಲ್ಲಿ ಸಾಗುವ ಭಕ್ತರಲ್ಲಿ ಆತಂಕ ಉಂಟು ಮಾಡಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ ತಿಂಗಳಲ್ಲಿ ಐದು ದಿನಗಳ ಮಹಾಶಿವರಾತ್ರಿ ಜಾತ್ರೆ ನಡೆಯಲಿದೆ. ಹೀಗಾಗಿ ಫೆಬ್ರವರಿ 8ರಿಂದಲೇ ಭಕ್ತರು ಸಾಗರೋಪಾದಿಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ಸಾಗುತ್ತಾರೆ.

ಲಕ್ಷಾಂತರ ಭಕ್ತರು ತೆರಳುವ ನಿರೀಕ್ಷೆ:

ಈ ಕ್ಷೇತ್ರಕ್ಕೆ ಸಂಗಮ ಬಳಿಯ ಕಾವೇರಿ ನದಿ ದಾಟಿದರೆ, ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗ ಹತ್ತಿರವಿದೆ. ಹೀಗಾಗಿ ಕೋಲಾರ, ಬೆಂಗಳೂರು ದಕ್ಷಿಣ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಲಕ್ಷಾಂತರ ಭಕ್ತರು ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ನಡೆಯುವ ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯಕ್ತ ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ಪ್ರತಿ ವರ್ಷ ತೆರಳುತ್ತಾರೆ.

ಕನಕಪುರದ ಏಳಗಹಳ್ಳಿಯಲ್ಲಿ ಪ್ರಾರಂಭವಾಗಲಿರುವ ಕಾಲ್ನಡಿಗೆ ಕನಪುರದ ಸಂಗಮ ಸ್ಥಳದಲ್ಲಿ ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟ ತಲುಪುತ್ತಾರೆ. ಭಕ್ತರ ಅನುಕೂಲಕ್ಕಾಗಿ ಸಂಗಮ ಬಳಿಯ ಕಾವೇರಿ ನದಿ ದಾಟಲು ದಡಕ್ಕೆ ಹಗ್ಗ ಕಟ್ಟಿ ಪಾದಯಾತ್ರಿಗಳು ತೆರಳಲು ಅವಕಾಶ ಮಾಡಿಕೊಡಲಾಗುತ್ತದೆ.

ಇನ್ನು ರಸ್ತೆ ಮಾರ್ಗವಾಗಿ ತೆರಳಿದರೆ 150 ಹೆಚ್ಚು ಕಿ.ಮೀ. ಆಗುತ್ತದೆ. ಹಾಗಾಗಿ ಭಕ್ತರು ಏಳಗಹಳ್ಳಿ ಮಾರ್ಗದಲ್ಲೇ ಕಾಲ್ನಡಿಗೆಯಲ್ಲಿ ತೆರಳುತ್ತಾರೆ. ಪಾದಯಾತ್ರೆ ಮೂಲಕ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಸ್ಥಳೀಯ ನಿವಾಸಿಗಳು ಹಾಗೂ ಭಕ್ತರು ಕುಡಿಯುವ ನೀರು, ಹಣ್ಣ ಹಂಪಲು ಮಾತ್ರವಲ್ಲದೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡುತ್ತಾರೆ.

ಬಾಕ್ಸ್ ...

ಕಾಲ್ನಡಿಗೆ ಭಕ್ತರಿಗೆ ಸೂಕ್ತ ರಕ್ಷಣೆ ಒದಗಿಸಿ: ಡಿಕೆಶಿ ಸೂಚನೆ

ರಾಮನಗರ: ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷ ದಂತೆ ಈ ವರ್ಷವೂ ಶ್ರೀಮಲೈ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭಕ್ತರು ತೆರಳಲಿದ್ದು, ಫೆಬ್ರವರಿ 8ರಿಂದ 11ರವರೆಗೆ ಕಾವೇರಿ ನದಿ ನೀರಿನ ಪ್ರಮಾಣ ಕಡಿಮೆ ಮಾಡುವುದು ಸೇರಿದಂತೆ ಭಕ್ತರಿಗೆ ಸೂಕ್ತ ರಕ್ಷಣೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಸಿಇಒಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದು ಸೂಚಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವಿವಿಧ ತಾಲೂಕುಗಳಿಂದ ಲಕ್ಷಾಂತರ ಭಕ್ತರು ಏಳಗಳ್ಳಿಯಿಂದ ಹೊರಟು ಸಂಗಮ, ಬೊಮ್ಮಸಂದ್ರದ ಕಾಲ್ಕಡ ಮಾರ್ಗವಾಗಿ ಬೆಟ್ಟಕ್ಕೆ ನಡೆದು ಹೋಗುವುದರಿಂದ ಆ ಮಾರ್ಗದಲ್ಲಿ ಹರಿದು ಹೋಗುವ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆ ಮಾಡುವುದು ಹಾಗೂ ಆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಂದ ರಕ್ಷಣೆ ಒದಗಿಸಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿ ಯಾವುದೇ ಅವಘಡಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಿ ಬೆಟ್ಟಕ್ಕೆ ಪಾದಯಾತ್ರೆ ಹೋಗುವ ಭಕ್ತರಿಗೆ ಸೂಕ್ತ ರಕ್ಷಣೆ ಒದಗಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

27ಕೆಆರ್ ಎಂಎನ್ 4,5.ಜೆಪಿಜಿ

4.ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಂಗಮದಲ್ಲಿ ಕಾವೇರಿ ನದಿ ದಾಟುತ್ತಿರುವುದು (ಸಂಗ್ರಹ ಚಿತ್ರ)

5.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಪಂ ಸಿಇಒಗೆ ಬರೆದಿರುವ ಪತ್ರ.