ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ

| Published : Feb 23 2024, 01:47 AM IST

ಸಾರಾಂಶ

ಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.

ಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.

ಕುಂದಾಣ ಹೊಬಲಿಯ ಜಾಲಿಗೆ ಗ್ರಾಪಂ ವ್ಯಾಪ್ತಿಯ ತಿಂಡ್ಲು ಸರ್ಕಾರಿ ಶಾಲೆ ಆವರಣದಲ್ಲಿ ಮೂರ್ತಿ ಪ್ರತಿಷ್ಠಾನದಿಂದ ೨ ಕೋಟಿ ವೆಚ್ಚದಲ್ಲಿ ಶಾಲಾ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಾಲೆಯ ನೆಲ ಮತ್ತು ಮೊದಲ ಅಂತಸ್ತಿನ ಮಹಡಿಯನ್ನು ನಿರ್ಮಿಸಿಕೊಡಲಾಗುವುದು. ಈಗಾಗಲೇ ರಾಜ್ಯದಾದ್ಯಂತ ಸಾಕಷ್ಟು ಶಾಲೆಗಳ ಅಭಿವೃದ್ಧಿ ಮಾಡಲಾಗಿದೆ. ೮೦ ಗ್ರಂಥಾಲಯಗಳನ್ನು ಕಟ್ಟಿಕೊಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳು ಉಳಿಯಬೇಕು. ಒಂದನೇ ತರಗತಿಯಿಂದ ಇಂಗ್ಲಿಷ್‌ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ಖಾಸಗಿ ಶಾಲಾ ವ್ಯಾಮೋಹ ಕಡಿಮೆ ಮಾಡಬೇಕು ಎಂದು ಹೇಳಿದರು.

ಜಾಲಿಗೆ ಗ್ರಾಪಂ ಮಾಜಿ ಅಧ್ಯಕ್ಷೆ ಸೌಮ್ಯಬಾಬು ಮಾತನಾಡಿ, ಮೂರ್ತಿ ಪ್ರತಿಷ್ಠಾನದಿಂದ ತಿಂಡ್ಲು ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸುತ್ತಿರುವುದು ಶ್ಲಾಘನೀಯ. ಪೋಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದರಲ್ಲಿಯೂ ಕಡಿಮೆ ಇಲ್ಲ. ಅದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಾಲಿಗೆ ಗ್ರಾಪಂ ಮತ್ತು ಗ್ರಾಮಸ್ಥರಿಂದ ಸುಧಾಮೂರ್ತಿ ಅವರನ್ನು ಅಭಿನಂದಿಸಿದರು. ಗ್ರಾಪಂ ಅಧ್ಯಕ್ಷ ಆನಂದ್‌ಕುಮಾರ್, ಸದಸ್ಯೆ ಲಕ್ಷಮ್ಮ, ಕೆಂಪಣ್ಣ, ಪಿಡಿಒ ಪ್ರಕಾಶ್, ಸಮಾಜ ಸೇವಕ ತಿಂಡ್ಲುಬಾಬು, ವಿಎಸ್ಸೆಸ್ಸೆನ್ ಅಧ್ಯಕ್ಷ ಎಸ್.ರಾಜು, ಎಂಪಿಸಿಎಸ್ ಅಧ್ಯಕ್ಷ ಮುನಿಶಾಮಪ್ಪ, ಕಾರ್ಯದರ್ಶಿ ವಿನೋದ್‌ಕುಮಾರ್, ಮೂರ್ತಿ, ಮುಖ್ಯ ಶಿಕ್ಷಕ ನಾಗೇಶ್, ಇತರರಿದ್ದರು.01 ಕುಂದಾಣ 22 ಚಿತ್ರಸುದ್ದಿ:

ಇನ್ಫೋಸಿಸ್‌ ಕಂಪೆನಿಯ ಮೂರ್ತಿ ಪ್ರತಿಷ್ಠಾನದಿಂದ ಜಾಲಿಗೆ ಗ್ರಾಪಂ ವ್ಯಾಪ್ತಿಯ ತಿಂಡ್ಲು ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಶಂಕುಸ್ಥಾಪನೆ ನೆರವೇರಿಸಿದರು.