ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲೆಯ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನೀಡುವ ಪರಿಹಾರಗಳ ಮೇಲ್ವಿಚಾರಣೆ ಸಭೆ ಅಧ್ಯಕ್ಷತೆ ವಹಿಸಿದ್ದ ಎಡಿಸಿ ಡಾ.ಪಿ. ಶಿವರಾಜು ಅವರು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸವಲತ್ತು ಒದಗಿಸುವಂತೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ರೈತರಿಗೆ ಎಲ್ಲಾ ರೀತಿಯಲ್ಲೂ ಸರ್ಕಾರದ ವತಿಯಿಂದ ನೀಡಲಾಗುವ ಎಲ್ಲಾ ಸೌಲಭ್ಯವನ್ನು ಅವರಿಗೆ ಮತ್ತು ಅವರ ಕುಟುಂಬದವರಿಗೆ ಕಡ್ಡಾಯವಾಗಿ ಒದಗಿಸುವಂತೆ ಹಾಗೂ ಜಿಲ್ಲೆಯಲ್ಲಿ ರೈತರಿಗೆ ಮತ್ತು ಅವರ ಕುಟುಂಬದವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.ರೈತರ ಮಕ್ಕಳಿಗೆ ಶಿಕ್ಷಣ ಒದಗಿಸುವಲ್ಲಿ ಸಹಕಾರ ನೀಡಬೇಕು. ಅಲ್ಲದೆ ಆಕಸ್ಮಿಕ ಬಣವೆ ನಷ್ಟ, ಹಾವು ಕಡಿತದ ಪ್ರಕರಣಗಳು ಇತ್ಯಾದಿ ಪ್ರಕರಣಗಳಲ್ಲಿಯೂ ರೈತರಿಗೆ ಸಹಾಯ ನೀಡಬೇಕೆಂದು ಮತ್ತು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದೆಂದು ಸೂಕ್ತ ನಿರ್ದೇಶನ ನೀಡಿದರು.ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಎಂದರು.ಸಭೆಯಲ್ಲಿ ಕೃಷಿ ಇಲಾಖೆ , ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು ಇದ್ದರು.