ಸಾರಾಂಶ
ಉಡುಪಿ : ಅರ್ಹ ಅಶಕ್ತ ಕುಟುಂಬಗಳಿಗೆ ಸೂರು ಕಲ್ಪಿಸುವ ಸೇವೆ ಕೂಡ ಶ್ರೀರಾಮ ದೇವರಿಗೆ ಸಂದ ಸೇವೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.ಅವರು ಶುಕ್ರವಾರ ಮಲ್ಪೆ ವಡಭಾಂಡೇಶ್ವರ ವಾರ್ಡಿನ ಸುಶೀಲಾ ಎಂಬವರಿಗೆ ಶಾಸಕ ಯಶ್ಪಾಲ್ ಸುವರ್ಣ ಅವರು ಪುಷ್ಪಾನಂದ ಫೌಂಡೇಶನ್ ಮೂಲಕ ತಮ್ಮ ಹೆತ್ತವರ ಸ್ಮರಣಾರ್ಥ 12 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿದ ಮನೆಯನ್ನು ಹಸ್ತಾಂತರಿಸಿ ಆಶೀರ್ವಚನ ಮಾಡಿದರು.
ಈ ಸಂದರ್ಭ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಪೇಜಾವರ ಶ್ರೀಗಳು ಅಯೋಧ್ಯೆ ಶ್ರೀರಾಮ ಮಂದಿರದ ನಿರ್ಮಾಣದ ನಂತರ, ಬಡವರಿಗೆ ಸೂರು ಕಲ್ಪಿಸುವ ಮೂಲಕ ರಾಮರಾಜ್ಯ ನಿರ್ಮಿಸುವ ಸಂಕಲ್ಪಕ್ಕೆ ಪೂರಕವಾಗಿ ಕಳೆದ ರಾಮನವಮಿ ಶುಭದಿನದಂದು ಪೇಜಾವರ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದ ಈ ಮನೆ ಇಂದು ಸ್ವಾಮೀಜಿಯವರ ಅಮೃತ ಹಸ್ತದಿಂದ ಹಸ್ತಾಂತರಗೊಳ್ಳುತ್ತಿರುವುದು ಸಂತಸ ತಂದಿದೆ ಎಂದರು.
ಸಮಾರಂಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸದಸ್ಯರಾದ ಲಕ್ಷ್ಮೀ ಮಂಜುನಾಥ, ಸುಂದರ ಕಲ್ಮಾಡಿ, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ, ಮಲ್ಪೆ ಮೀನುಗಾರ ಸಂಘ ಅಧ್ಯಕ್ಷ ದಯಾನಂದ ಸುವರ್ಣ, ಕಚ್ಚೂರು ಮಾಲ್ತಿದೇವಿ ದೇವಸ್ಥಾನದ ಪ್ರಮುಖರಾದ ಗೋಕುಲ್ ದಾಸ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ದಲಿತ ಮುಖಂಡರಾದ ಜಯನ್ ಮಲ್ಪೆ, ದಿನಕರ ಬಾಬು, ಅಜಿತ್ ಕಪ್ಪೆಟ್ಟು, ಮಂಜು ಕೊಳ, ಶ್ರೀ ಸನಿಲ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಸಂಧ್ಯಾ ರಮೇಶ್, ವಾಸುದೇವ ಸಾಲ್ಯಾನ್, ವನಜಾ ಪುತ್ರನ್, ಹಿಂದೂ ಯುವ ಸೇನೆಯ ಗೌರವಾಧ್ಯಕ್ಷ ಶೇಖರ ಶೆಟ್ಟಿ ಹಿರಿಯಡ್ಕ, ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ನಗರ ಅಧ್ಯಕ್ಷ ಸುನೀಲ್ ನೇಜಾರು ಮೊದಲಾದವರು ಉಪಸ್ಥಿತರಿದ್ದರು.ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಾಸಕರ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಕೋಟ್ಯಾನ್ ವಂದಿಸಿದರು.