ಕನ್ನಡಪ್ರಭ ವಾರ್ತೆ ಬೆಳಗಾವಿ ಶಾಸಕ ಅಭಯ ಪಾಟೀಲ ಅವರು ಮುಸ್ಲಿಂ ಸಮಾಜದ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಬೆಳಗಾವಿ ನಗರದ ಜವಾಬ್ದಾರಿಯುತ ನಾಗರಿಕ ವತಿಯಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಶಾಸಕ ಅಭಯ ಪಾಟೀಲ ಅವರು ಮುಸ್ಲಿಂ ಸಮಾಜದ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಬೆಳಗಾವಿ ನಗರದ ಜವಾಬ್ದಾರಿಯುತ ನಾಗರಿಕ ವತಿಯಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಂವಿಧಾನದ ಪ್ರಕಾರ ಜನಪ್ರತಿನಿಧಿಯೊಬ್ಬರು ಎಲ್ಲ ಸಮುದಾಯದ ನಾಗರಿಕರನ್ನು ಸಮಾನರಂತೆ ಕಾಣಬೇಕು. ಅಲ್ಲದೇ, ಸೌಹಾರ್ದತೆ, ಸಹಿಷ್ಣತೆ ಹಾಗೂ ಸಾಮಾಜಿಕ ಏಕತೆಯನ್ನು ಕಾಪಾಡುವ ಜವಾಬ್ದಾರಿ ಹೊಂದಿರುತ್ತಾರೆ. ಆದರೆ, ಶಾಸಕ ಅಭಯ ಪಾಟೀಲ ಅವರು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಸಾರ್ವಜನಿಕ ಸಮಾರಂಭದಲ್ಲಿ ಸಮಾಜದ ವಿರುದ್ಧ ಪ್ರಚೋದನಾತ್ಮಕ ಹಾಗೂ ಅನ್ಯ ಸಮುದಾಯಗಳ ನಡುವೆ ದ್ವೇಷ ಹುಟ್ಟುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ದೂರಿದ್ದಾರೆ.

ಶಾಸಕ ಅಭಯ ಪಾಟೀಲ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಅಭಿವೃದ್ಧಿ, ಶಿಕ್ಷಣ, ಉದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು, ಒಂದು ಸಮುದಾಯದ ಕುರಿತು ದ್ವೇಷ ಭಾಷಣ ಮಾಡುವುದು ಸರಿಯಲ್ಲ. ಕೂಡಲೇ ಈ ಬಗ್ಗೆ ತನಿಖೆ ನಡೆಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.