ಪ್ರಚೋದನಕಾರಿ ಹೇಳಿಕೆ: ಶಾಸಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

| Published : Jul 11 2024, 01:37 AM IST

ಪ್ರಚೋದನಕಾರಿ ಹೇಳಿಕೆ: ಶಾಸಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ರಾಹುಲ್‌ಗಾಂಧಿ ವಿರುದ್ಧ ಶಾಸಕ ಡಾ.ಭರತ್ ಶೆಟ್ಟಿ ನೀಡಿರುವ ಅನುಚಿತ ಹೇಳಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವತಿಯಿಂದ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು ಎಂದು ಮಂಜುನಾಥ ಭಂಡಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ನೀಡಿರುವ ಮತ್ತು ಹಿಂಸೆಗೆ ಪ್ರಚೋದನೆ ಹೇಳಿಕೆ ನೀಡಿರುವ ಕಾರಣ ಶಾಸಕ ಡಾ.ಭಾರತ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಗೃಹ ಸಚಿವರಿಗೆ ಮನವಿ ಮಾಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಅವರು ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದೇಶದ ಸಂಸತ್‌ನಲ್ಲಿ ಸಂವಿಧಾನಿಕವಾದ ಅಗ್ರಸ್ಥಾನವನ್ನು ಹೊಂದಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿರುವ ಕಾರಣ ಡಾ.ಭರತ್ ಶೆಟ್ಟಿಯ ವಿರುದ್ಧ ಗೃಹ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಹುಲ್‌ಗಾಂಧಿ ವಿರುದ್ಧ ಶಾಸಕ ಡಾ.ಭರತ್ ಶೆಟ್ಟಿ ನೀಡಿರುವ ಅನುಚಿತ ಹೇಳಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವತಿಯಿಂದ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು ಎಂದರು.

ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾರ್‌ ಮಾತನಾಡಿ, ಡಾ. ಭರತ್ ಶೆಟ್ಟಿ ತನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ವೈದ್ಯ ವೃತ್ತಿಯಲ್ಲಿಯೂ ಮುಂದುವರಿಯಲು ಯೋಗ್ಯರಲ್ಲ ಎಂದರು.

ಕಾಂಗ್ರೆಸ್ ಮುಖಂಡರಾದ ಜಿ.ಎ.ಬಾವ, ಶಾಲೆಟ್ ಪಿಂಟೋ, ಶಾಹುಲ್ ಹಮೀದ್, ಪ್ರವೀಣ್ ಚಂದ್ರ ಆಳ್ವ, ಲಾರೆನ್ಸ್ ಡಿ ಸೋಜಾ, ಸುಹಾನ್ ಆಳ್ವ, ಅನಿಲ್ ಕುಮಾರ್ ಪೂಜಾರಿ, ನಿರಾಜ್ ಚಂದ್ರ ಪಾಲ್, ಟಿ. ಕೆ. ಸುಧೀರ್ ಇದ್ದರು.