ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದ ಕಾಂಗ್ರೆಸ್ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಪ ಪ್ರಚಾರ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ
ಮಡಿಕೇರಿ: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದ ಕಾಂಗ್ರೆಸ್ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಪ ಪ್ರಚಾರ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದ್ದಾರೆ.
ವಿಬಿ ರಾಮ್ ಜಿ ಯೋಜನೆ ಬಗ್ಗೆ ಮಡಿಕೇರಿಯ ಜಿಲ್ಲಾ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಈ ಹಿಂದೆ ಶೇ.40 ಕಮಿಷನ್ ಎಂದು ಅಪಪ್ರಚಾರ ಮಾಡಿ ಗೆದ್ದ ಕಾಂಗ್ರೆಸ್ ಇದೀಗ ವಿಬಿ ರಾಮ್ ಜಿ ಯೋಜನೆ ಬಗ್ಗೆ ಅದೇ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ ಎಂದು ಆರೋಪಿಸಿದರು.ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ವಿಬಿ ರಾಮ್ ಜಿ ಬಗ್ಗೆ ಜನತೆಯ ತೆರಿಗೆ ಹಣದಲ್ಲಿ ಕಾಂಗ್ರೆಸ್ ದುಬಾರಿ ಜಾಹೀರಾತು ನೀಡುತ್ತಿರುವುದು ಅಕ್ಷಮ್ಯ. ಈ ಯೋಜನೆಗೆ ಶೇ.40 ಹಣ ನೀಡಬೇಕೆಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ವಿರೋಧ ಮಾಡುತ್ತಿದೆ. ಗಾಂಧಿಜಿ ಹೆಸರು ಅವರಿಗೆ ನೆಪ ಮಾತ್ರ ಎಂದರು.
ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಎಂಎಲ್ಸಿ ಸುನಿಲ್ ಸುಬ್ರಮಣಿ, ಪ್ರಮುಖರಾದ ರಾಬಿನ್ ದೇವಯ್ಯ, ವಿ.ಕೆ. ಲೋಕೇಶ್, ಮನು ಮುತ್ತಪ್ಪ ಮತ್ತಿತರರು ಪಾಲ್ಗೊಂಡಿದ್ದರು.