ಸಾರಾಂಶ
ಕನ್ನಡಪ್ರಭ ವಾರ್ತೆ ಜಮಖಂಡಿ ವಾಹನ ಸವಾರರು ಸಂಚಾರಿ ನಿಯಮ ಪಾಲಿಸುವಂತೆ ಪಿಎಸ್‌ಐ ಅನಿಲ್ ಕುಂಬಾರ ಸೂಚನೆ ನೀಡಿದರು. ನಗರದ ಮಾರುಕಟ್ಟೆ ಪ್ರದೇಶ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಸಂಚಾರ ನಡೆಸಿದ ಅವರು ಜನ ನಿಬಿಡ ಪ್ರದೇಶದಲ್ಲಿ ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬೇಕು ಹಾಗೂ ಬೇಕಾಬಿಟ್ಟಿಯಾಗಿ ವಾಹನಗಳನ್ನು ಮಾರುಕಟ್ಟೆ ಪ್ರದೇಶದಲ್ಲಿ ನಿಲ್ಲಿಸಿದರೆ ದಂಡ ಭರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ವಾಹನ ಸವಾರರು ಸಂಚಾರಿ ನಿಯಮ ಪಾಲಿಸುವಂತೆ ಪಿಎಸ್‌ಐ ಅನಿಲ್ ಕುಂಬಾರ ಸೂಚನೆ ನೀಡಿದರು. ನಗರದ ಮಾರುಕಟ್ಟೆ ಪ್ರದೇಶ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಸಂಚಾರ ನಡೆಸಿದ ಅವರು ಜನ ನಿಬಿಡ ಪ್ರದೇಶದಲ್ಲಿ ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬೇಕು ಹಾಗೂ ಬೇಕಾಬಿಟ್ಟಿಯಾಗಿ ವಾಹನಗಳನ್ನು ಮಾರುಕಟ್ಟೆ ಪ್ರದೇಶದಲ್ಲಿ ನಿಲ್ಲಿಸಿದರೆ ದಂಡ ಭರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ನಗರದಲ್ಲಿ ಜನದಟ್ಟನೆಗೆ ಅನುಗುಣವಾಗಿ ವಾಹನಗಳನ್ನು ನಿಲ್ಲಿಸಲು ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಏಕ ಮಾರ್ಗ ಸಂಚಾರಕ್ಕೆ ಕೆಲ ರಸ್ತೆಗಳನ್ನು ಗುರುತಿಸಲಾಗಿದೆ. ಅದಕ್ಕೆ ಅನುಗುಣವಾಗಿ ವಾಹನ ಸವಾರರು ಸಂಚಾರ ನಡೆಸಬೇಕು. ಒನ್ ವೇಗಳ ವಿರುದ್ಧ ವಾಹನ ಚಲಾಯಿಸಬಾರದು ಎಂದರು, ಶ್ರಾವಣ ಮಾಸದ ಪ್ರಯುಕ್ತ ಮಾರುಕಟ್ಟೆ ಪ್ರದೇಶದಲ್ಲಿ ಜನ ದಟ್ಟನೆ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕೆಂದರು. ಶಹರ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.