ಪಿಯು ಪರೀಕ್ಷೆ ಶುರು: ಡಿಸಿ ದಿವ್ಯಪ್ರಭು ಭೇಟಿ, ಪರಿಶೀಲನೆ

| Published : Mar 02 2025, 01:16 AM IST

ಸಾರಾಂಶ

ಕೆಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು, ಪರೀಕ್ಷಾ ವ್ಯವಸ್ಥೆ, ಪೂರ್ವಸಿದ್ಧತೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಹಾಜರಾತಿ, ಪರೀಕ್ಷಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಕಾರ್ಯವಿಧಾನ ಪರಿಶೀಲಿಸಿದರು.

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರದಿಂದ ಶುರುವಾಗಿದ್ದು, ಮೊದಲ ದಿನ ಶಾಂತಿಯುತವಾಗಿ ಪರೀಕ್ಷೆಗಳು ನಡೆದವು.

ಮೊದಲ ದಿನ ನಡೆದ ಕನ್ನಡ ಪರೀಕ್ಷೆಗೆ 19169 ವಿದ್ಯಾರ್ಥಿಗಳ ಪೈಕಿ 18726 ವಿದ್ಯಾರ್ಥಿಗಳು ಹಾಜರಾಗಿದ್ದರು. 422 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಪರಿಶೀಲನೆ:

ಈ ನಡುವೆ ಕೆಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು, ಪರೀಕ್ಷಾ ವ್ಯವಸ್ಥೆ, ಪೂರ್ವಸಿದ್ಧತೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಹಾಜರಾತಿ, ಪರೀಕ್ಷಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಕಾರ್ಯವಿಧಾನ ಪರಿಶೀಲಿಸಿದರು.

ಪ್ರಿಸಮ್ ಪದವಿಪೂರ್ವ ಕಾಲೇಜು ಮತ್ತು ಜೆಎಸ್ಎಸ್‌ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದರು. ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗೆ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷಾ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಪರೀಕ್ಷೆಗಳ ಕುರಿತಾಗಿ ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿಯೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು.