ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.ಅಲ್ಲದೆ, ಇದೇ ಮೊದಲ ಬಾರಿಗೆ ಫಲಿತಾಂಶ ಜೊತೆಗೆ ಡಿಜಿಲಾಕರ್ ಮೂಲಕ ಡಿಜಿಟಲ್ ಅಂಕಪಟ್ಟಿಯನ್ನೂ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಮತ್ತು ‘ಕರ್ನಾಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು. ಅಷ್ಟೇ ಅಲ್ಲ, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಯ ಸಮಯದಲ್ಲೇ ಅವರ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿ ಮಾಹಿತಿ ನೀಡಿದೆ.ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಯಾವ ರೀತಿ ಡೌನ್‌ಲೋಡ್ ಮಾಡಿಕೊಳ್ಳಬೇಕು ಎನ್ನುವ ಮಾಹಿತಿಯನ್ನು https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು. ರಾಜ್ಯದ ಎಲ್ಲಾ ಪಿಯು ಕಾಲೇಜುಗಳಿಗೂ ತಮ್ಮ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿಯನ್ನು ಗುರುವಾರ ಮಧ್ಯಾಹ್ನ 3 ಗಂಟೆಗೇ ಲಭ್ಯಗೊಳಿಸಲಾಗುವುದು ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆ 6.15ಕ್ಕೆ ಫಲಿತಾಂಶದ ಒಟ್ಟಾರೆ ಮಾಹಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸುದ್ಧಿಗೋಷ್ಠಿ ಮೂಲಕ ಪ್ರಕಟಿಸಲಿದ್ದಾರೆ.ಹೀಗೆ ನೋಡಿ ರಿಸಲ್ಟ್‌ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಮತ್ತು ‘ಕರ್ನಾಟಕ ಒನ್’ ಮೊಬೈಲ್ ಆಪ್ ಮೂಲಕ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ಮಂಡಳಿಯಿಂದ ರವಾನೆ.----ಅಂಕಪಟ್ಟಿ ಪಡೆಯೋದು ಹೇಗೆ?https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಯಾವ ರೀತಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂಬ ಮಾಹಿತಿಯನ್ನು https://tinyurl.com/mw84wmh9 ಮೂಲಕ ತಿಳಿದುಕೊಳ್ಳಬಹುದು.----