ಒಳಮೀಸಲಾತಿ ಜಾರಿಗಾಗಿ ಜನಾಕ್ರೋಶ, ಪ್ರತಿಭಟನೆ

| Published : Aug 01 2025, 11:45 PM IST

ಸಾರಾಂಶ

ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಇಂದಿಗೆ ಒಂದು ವರ್ಷ ತುಂಬಲಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಪರಿಶಿಷ್ಟ ಸಮುದಾಯದಲ್ಲಿ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಹೋರಾಟ ಒಕ್ಕೂಟದ ವತಿಯಿಂದ ನಗರದಲ್ಲಿ ಜನಾಕ್ರೋಶ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಅರಕಲವಾಡಿ ನಾಗೇಂದ್ರ ಮಾತನಾಡಿ, ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಇಂದಿಗೆ ಒಂದು ವರ್ಷ ತುಂಬಲಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ವಿಳಂಬ ಧೋರಣೆ ಅನುಸರಿಸುತ್ತಿದೆ. ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳದಿದ್ದರೆ, ಕರ್ನಾಟಕ ಬಂದ್ ಮಾಡಲೂ ಕೂಡ ನಿರ್ಧಾರ ಮಾಡಲಾಗಿದ್ದು, ಅಸಹಕಾರ ಚಳವಳಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಸುಪ್ರೀಂ ಕೋರ್ಟ್ ತೀರ್ಪು ಬಳಿಕ ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್‌ನಲ್ಲಿ ಒಳಮೀಸಲಾತಿ ಜಾರಿ ಮಾಡಲಾಗಿದೆ. ಹೀಗಿದ್ದರೂ ಕರ್ನಾಟಕದಲ್ಲಿ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ. ಇದು ಸರಿಯಲ್ಲ. ಒಳ ಮೀಸಲಾತಿ ಜಾರಿಯಾಗಬೇಕು ಎನ್ನುವುದು ಕಳೆದ ಮೂರೂವರೆ ದಶಕಗಳಿಂದ ನಡೆಯುತ್ತಿರುವ ಹೋರಾಟವಾಗಿದೆ. ಒಳ ಮೀಸಲಾತಿ ಶೀಘ್ರ ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದರು.ಜಿಲ್ಲಾ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಶೋಷಿತ ಸಮುದಾಯಗಳಿಗೆ ಸಾಮಾಜಿಕ ನೆಲೆಗಟ್ಟಿನಲ್ಲಿ ನಮಗೆ ಮೀಸಲಾತಿ ಕೊಟ್ಟಿದ್ದಾರೆ. 101 ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಸಮಾನವಾಗಿ ಹಂಚಿಕೆ ಆಗಬೇಕು. ಒಳ ಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯ ಕಳೆದ 35 ವರ್ಷಗಳಿಂದಲೂ ಹೋರಾಟ ಮಾಡುತ್ತಿದೆ. ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದ್ದು, ಒಳ ಮೀಸಲಾತಿ ನೀಡಲು ಆಯಾಯ ರಾಜ್ಯಗಳಿಗೆ ಅವಕಾಶ ನೀಡಿದೆ. 15 ದಿನಗಳೊಳಗೆ ಒಳಮೀಸಲಾತಿ ಜಾರಿಯಾಗದಿದ್ದರೆ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದರು.ಪ್ರತಿಭಟನೆಯಲ್ಲಿ ಮೂಡಹಳ್ಳಿಮೂರ್ತಿ, ರಂಗಸ್ವಾಮಿ, ,ಸುಂದರ, ಚಾ.ಗು.ನಾಗರಾಜ್, ವಕೀಲರಾದ ಬೂದಿತಿಟ್ಟು, ರಾಜೇಂದ್ರ ಸಿದ್ದೇಶ್, ಮಹದೇವಯ್ಯ, ನಿವೃತ್ತ ಅಧಿಕಾರಿ ಜವರಯ್ಯ, ರಾಮಸಮುದ್ರ ಶಿವಣ್ಣ, ಶಿವಕುಮಾರ್, ಸಿದ್ದರಾಜು, ಸಿದ್ದಯ್ಯ, ಮಹೇಶ್, ಹನೂರು ಮಹದೇವು, ಚೆನ್ನಬಸಪ್ಪ, ರವಿ, ಬಸವಣ್ಣ,ಮಹದೇವ, ಮಹದೇವು, ಸಂಪತ್ ,ಅಪ್ಪು, ದೇವರಾಜು, ಗುರುಲಿಂಗಯ್ಯ,ರವಿ, ಮಹದೇವಸ್ವಾಮಿ ,ಚಿನ್ನಸ್ವಾಮಿ ಇತರರು ಭಾಗವಹಿಸಿದ್ದರು----------೧ಸಿಎಚ್‌ಎನ್೧ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಹೋರಾಟ ಒಕ್ಕೂಟದ ವತಿಯಿಂದ ನಗರದಲ್ಲಿ ಜನಾಕ್ರೋಶ ಪ್ರತಿಭಟನೆ ನಡೆಸಲಾಯಿತು.----೧ಸಿಎಚ್‌ಎನ್೨ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಹೋರಾಟ ಒಕ್ಕೂಟದ ವತಿಯಿಂದ ನಗರದಲ್ಲಿ ಜನಾಕ್ರೋಶ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜವರೇಗೌಡರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.--------