ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ

| Published : Jun 10 2025, 01:24 AM IST

ಸಾರಾಂಶ

ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು

ಶಿರಸಿ: ಉಡುಪಿ ಅಕಾಡೆಮಿ ಆಫ್ ಎಕ್ಸೆಲೆನ್ಸ್ ಹಾಗೂ ಪೊಲೀಸ್ ಇಲಾಖೆಯಿಂದ ಮಂಗಳವಾರ ನಗರದ ಅಂಚೆ ವೃತ್ತದಲ್ಲಿ ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಮಾತನಾಡಿ, ಶಿರಸಿ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಟ್ರಾಫಿಕ್ ಪೋಲೀಸ್ ಠಾಣೆ ಆರಂಭವಾಗಿದೆ. ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು.ಇದರಿಂದ ಅಪಘಾತಗಳ ಸಂಖ್ಯೆ ಇಳಿಮುಖವಾಗುತ್ತದೆ ಎಂದರು.

ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಮಹಾಂತೇಶ ಕಂಬಾರ ಮಾತನಾಡಿ, ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಅಪಘಾತಗಳು ಸಂಭವಿಸುವುದಿಲ್ಲ. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಬೇಕು. ಕುಡಿದು ವಾಹನ ಚಾಲನೆ ಮಾಡಬಾರದು. ಅಪ್ರಾಪ್ತರು ವಾಹನ ಚಾಲನೆ ಮಾಡಬಾರದು. ದಂಡ ಮುಖ್ಯವಲ್ಲ. ಪ್ರಾಣ ಮುಖ್ಯವಾಗಿರುತ್ತದೆ.ನಮಗಾಗಿ ಅಲ್ಲ. ನಿಮಗಾಗಿ ನಿಮ್ಮ ಕುಟುಂಬಕ್ಕಾಗಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.