ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ವಕ್ಫ್ ಕಾಯಿದೆ ದುರುಪಯೋಗ ಮಾಡಿಕೊಂಡು ಹಿಂದೂಗಳಿಗೆ ಕಿರುಕುಳ ನೀಡುತ್ತಿರುವ ವಕ್ಫ್ ಕಿತಾಪತಿ ಖಂಡಿಸಿ ಜನಾಂದೋಲನ ರೂಪಿಸುವ ನಿಟ್ಟಿನಲ್ಲಿ ನವೆಂಬರ್ ೨೧ರ ಗುರುವಾರದಂದು ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯವರೆಗೂ "ನಮ್ಮ ಭೂಮಿ ನಮ್ಮ ಹಕ್ಕು " ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ ನಾಗೇಂದ್ರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ವಕ್ಫ್ ಕಾಯಿದೆ ಅಡಿ ಯಾವ ನೋಟಿಸ್ ನೀಡದೇ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಮುದ್ರವಾಗುತ್ತಿರುವುದರಲ್ಲಿ ಶೋಷಣೆಗೆ ಒಳಗಾದ ರೈತರು, ಮಠಮಂದಿರಗಳು ಶಾಲೆ, ರುದ್ರಭೂಮಿ ಇತರೆಯಿಂದ ತೊಂದರೆಗೀಡಾದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು. ಈ ನಿಟ್ಟಿನಲ್ಲಿ ನವೆಂಬರ್ ೨೧ರ ಗುರುವಾರದಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೂ ಜನಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ವಕ್ಫ್ ಆಸ್ತಿ ಸಂಬಂಧ ಇಡೀ ರಾಜ್ಯದಲ್ಲಿ ಸಮಸ್ಯೆ ಎದುರಾಗಿದ್ದು, ವಕ್ಫ್ ಕಾಯಿದೆ ದುರುಪಯೋಗ ಮಾಡಿಕೊಂಡು ಹಿಂದೂಗಳಿಗೆ ಕಿರುಕುಳ ನೀಡುತ್ತಿರುವ ವಕ್ಫ್ ಕಿತಾಪತಿ ಖಂಡಿಸಿ ಜನಾಂದೋಲನ ರೂಪಿಸುವ ನಿಟ್ಟಿನಲ್ಲಿ ನವೆಂಬರ್ ೨೧ರ ಗುರುವಾರದಂದು ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯವರೆಗೂ "ನಮ್ಮ ಭೂಮಿ ನಮ್ಮ ಹಕ್ಕು " ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ ನಾಗೇಂದ್ರ ತಿಳಿಸಿದರು., ವ್ಯವಸ್ಥಿತವಾಗಿ ಜನರನ್ನು ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿ ಜಿಲ್ಲೆಯಲ್ಲಿ ಐದು ಜನರ ತಂಡ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.ಕಾನೂನಾತ್ಮಕ ಹೋರಾಟಕ್ಕೆ ಶಕ್ತಿ ತುಂಬುವ ಸಲುವಾಗಿ ಈ ತಂಡ ರಚಿಸಲಾಗಿದ್ದು, ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಡಿ ಪ್ರತಿ ಜಿಲ್ಲೆಯಲ್ಲಿ ಮಠಾಧೀಶರು ಸೇರಿದಂತೆ ಎಲ್ಲಾ ಜಿಲ್ಲೆಯ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಂತೆ ಎಲ್ಲರನ್ನೂ ಭೇಟಿ ಮಾಡಿ ಜನಜಾಗೃತಿ ಮೂಡಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಈ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು. ಡಿಸೆಂಬರ್ ಮೊದಲ ವಾರದಿಂದ ರಾಜ್ಯದಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ರೈತರು ಮಠ ಮಾನ್ಯ ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವರ ಸಮಸ್ಯೆಗಳನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುವುದು ಹಾಗೂ ನೈಜ ವರದಿಯನ್ನು ಸದನದಲ್ಲಿ ಚರ್ಚಿಸುವುದಾಗಿ ಹೇಳಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಡಿ.ಬಿ. ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ಪ್ರಮುಖ ರಾಜ್ಯ ನಾಯಕರು ಹೋರಾಟದಲ್ಲಿ ಭಾಗವಹಿಸಲಿದ್ದು, ಕನಿಷ್ಠ ೮ರಿಂದ ೧೦ ಜಿಲ್ಲೆಗಳನ್ನು ಪ್ರವಾಸ ಮಾಡಲಿದ್ದಾರೆ.. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ರಾಜ್ಯ ಅಧ್ಯಕ್ಷರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಕೆಲ ತಿಂಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲೆ ಬಾಂಗ್ಲದೇಶಿಗರಿಗೆ ನಕಲಿ ಆಧಾರ್ ಕಾರ್ಡ್‌ಮಾಡುತ್ತಿದ್ದ ಬಗ್ಗೆ ಜಿಲ್ಲಾಧಿಕಾರಿ ಎದುರೇ ಬಹಿರಂಗವಾಗಿ ಪತ್ತೆ ಆಗಿದ್ದು, ಆದರೇ ಯಾವ ಶಿಕ್ಷೆಯಾಗದೇ ಮತ್ತೆ ಕರ್ತವ್ಯದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಬಂದಿದ್ದು, ಇದನ್ನು ಖಂಡಿಸುತ್ತೇವೆ. ಈ ಬಗ್ಗೆ ನಮ್ಮ ಹೋರಾಟದಲ್ಲಿ ಇದನ್ನು ಕೂಡ ಸೇರಿಸಿಕೊಳ್ಳಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಮಾಜಿ ಜಿಲ್ಲಾಧ್ಯಕ್ಷ ನವಿಲೇ ಅಣ್ಣಪ್ಪ ಮಾತನಾಡಿ, ಮಾಹಿತಿ ಇರುವಂತೆ ಜಿಲ್ಲೆಯಲ್ಲಿ ಶಾಲೆ, ಹಿಂದೂ ರುದ್ರಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಮಾಡಿರುವುದು ಕಂಡಿದ್ದೇವೆ. ದಯಾಮಾಡಿ ಪ್ರತಿಯೊಬ್ಬ ರೈತರು ಹಾಗೂ ಸಾರ್ವಜನಿಕರು ತಮ್ಮ ಜಾಗದ ಪಹಣಿಯನ್ನು ಆಗಾಗ್ಗೆ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಕೋರಿದರು. ಮುಖ್ಯಮಂತ್ರಿಗಳು ನೋಟಿಸ್‌ಗಳ ವಾಪಸ್ ತೆಗೆದುಕೊಂಡಿದ್ದೇವೆ ಎಂದಿರುವುದು ಕಣ್ಣು ಒರೆಸುವ ತಂತ್ರವಾಗಿದೆ. ನಮಗೆ ಈ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಈ ವೇಳೆ ಅಗತ್ಯವಿದ್ದರೇ ನ್ಯಾಯಾಲಯದಲ್ಲಿ ಉಚಿತವಾಗಿ ವಾದ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಗಿರೀಶ್, ರೈತ ಮೋರ್ಚಾ ಅಧ್ಯಕ್ಷ ಬಿ.ಎಚ್. ನಾರಾಯಣಗೌಡ, ಎಸ್.ಡಿ. ಚಂದ್ರು, ಇತರರು ಉಪಸ್ಥಿತರಿದ್ದರು.