ಸಂಚಾರ ನಿಯಮಗಳ ಪಾಲನೆ ಜನಜಾಗೃತಿ ಕಾರ್ಯಕ್ರಮ

| Published : Jun 21 2024, 01:09 AM IST

ಸಂಚಾರ ನಿಯಮಗಳ ಪಾಲನೆ ಜನಜಾಗೃತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ, ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸಂಚಾರ ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ, ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿ ಸಿಬ್ಬಂದಿ ತಂಡಗಳು ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸಂಚಾರ ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.ಈ ಸಂದರ್ಭ ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ ಪೋಷಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ದಂಡವನ್ನು ವಿಧಿಸಿ ಸಂಚಾರ ನಿಯಮಗಳ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಲಾಯಿತು. ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಒಟ್ಟು 28 ಪ್ರಕರಣಗಳಲ್ಲಿ ₹14000, ಅತೀ ವೇಗ, ನಿರ್ಲಕ್ಷ್ಯ ಚಾಲನೆಯ 1 ಪ್ರಕರಣದಲ್ಲಿ ₹500 ಹಾಗೂ ತ್ರಿಬಲ್ ರೈಡಿಂಗ್ ನ 5 ಪ್ರಕರಣಗಳಲ್ಲಿ ₹2500 ದಂಡ ವಿಧಿಸಲಾಯಿತು.

ಸಂಚಾರಿ ಪೊಲೀಸ್ ಅಧಿಕಾರಿ ಸಿಬ್ಬಂದಿ ತಂಡ ಮಾಹಿತಿ ನೀಡಿ, ವಾಹನಗಳನ್ನು ಚಾಲನೆ ಮಾಡುವಾಗ ಕಡ್ಡಾಯವಾಗಿ ಚಾಲನಾ ಪರವಾನಿಗೆ ಮತ್ತು ವಾಹನದ ಇನ್ಶೂರೆನ್ಸ್ ಹೊಂದಿರಬೇಕು. ಹೆಲ್ಮೆಟ್ ಧರಿಸಬೇಕು. ಟ್ರಿಪಲ್ ರೈಡಿಂಗ್, ಏಕಮುಖ ಸಂಚಾರ ಮಾಡಬಾರದು. ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬಾರದು. ಆಟೋಗಳು ಶಾಲೆಗೆ ಮಕ್ಕಳನ್ನು ಕರೆತರುವಾಗ ಅನುಮತಿಗಿಂತ ಅಧಿಕ ಮಕ್ಕಳಗಳನ್ನು ಕರೆತರಬಾರದು ತಿಳಿಸಿದರು.

- - - -19ಕೆಡಿವಿಜಿ39:

ದಾವಣಗೆರೆಯ ಸೀತಮ್ಮ ಶಾಲೆ ಕಾಲೇಜು ಸೇರಿದಂತೆ ವಿವಿಧೆಡೆ ಸಂಚಾರ ನಿಯಮಗಳ ಪಾಲನಾ ಜಾಗೃತಿ ಮೂಡಿಸಲಾಯಿತು.