ಸಾರಾಂಶ
ರೇಬಿಸ್ ಹುಚ್ಚು ನಾಯಿ ಕಡಿತದಿಂದ ಉಂಟಾಗಬಹುದಾದ ರೋಗ. ಈ ಕುರಿತು ಜನಗಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೇಬಿಸ್ ನಿಯಂತ್ರಣ ಕುರಿತು ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚು ಪ್ರಚಾರ ಮೂಡಿಸಬೇಕು. ಜೈವಿಕ ತ್ಯಾಜ್ಯ ಹಾಗೂ ಕಸ ವಿಲೇವಾರಿ ಸ್ವಚ್ಛತೆಗೆ ಕ್ರಮ ವಹಿಸಬೇಕು.
ಕನ್ನಡಪ್ರಭ ವಾರ್ತೆ ಕೋಲಾರರೇಬಿಸ್ ಖಾಯಿಲೆಯನ್ನು ಲಸಿಕೆ ನೀಡುವುದರ ಮೂಲಕ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಜಿಲ್ಲಾ ಪ್ರಾಣಿ ಸಂಗ್ರಹಣ ಸಮಿತಿ ಹಾಗೂ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಸಭೆ ಉದ್ದೇಶಿಸಿ ಮಾತನಾಡಿದರು.ರೇಬಿಸ್ ಬಗ್ಗೆ ಜಾಗೃತಿ ಅಗತ್ಯ
ರೇಬಿಸ್ ಹುಚ್ಚು ನಾಯಿ ಕಡಿತದಿಂದ ಉಂಟಾಗಬಹುದಾದ ರೋಗ. ಈ ಕುರಿತು ಜನಗಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೇಬಿಸ್ ನಿಯಂತ್ರಣ ಕುರಿತು ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚು ಪ್ರಚಾರ ಮೂಡಿಸಬೇಕು. ಹೋಟೆಲ್‌ಗಳಲ್ಲಿ, ಅಂಗಡಿಗಳಲ್ಲಿ, ಚಿಕನ್ ಸೆಂಟರ್ ಹಾಗೂ ಮುಂತಾದವುಗಳಲ್ಲಿ ಉತ್ಪನ್ನವಾಗುವ, ಜೈವಿಕ ತ್ಯಾಜ್ಯ ಹಾಗೂ ಕಸ ವಿಲೇವಾರಿ ಸ್ವಚ್ಛತೆಯ ಬಗ್ಗೆ ಸೂಕ್ತ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.ಜೈವಿಕ ತ್ಯಾಜ್ಯ ಸರಿಯಾಗಿ ವಿಲೇಯಾಗದಿದ್ದರೆ, ನಾಯಿಗಳ ಉಪಟಳ ಹೆಚ್ಚಾಗುತ್ತದೆ. ಇದರಿಂದ ಸಾರ್ವಜನಿಕರಲ್ಲಿ ಭೀತಿ ಉಂಟಾಗುವ ಸಾಧ್ಯತೆಯಿರುತ್ತದೆ. ಮನೆಗಳಲ್ಲಿ ಸಾಕು ಪ್ರಾಣಿಗಳಿಗೆ ನಿಯಮಿತ ಹಾಗೂ ನವೀಕೃತ ವ್ಯಾಕ್ಸಿನೇಷನ್ ಅಥವಾ ಲಸಿಕೆಯನ್ನು ಮಾಡಿಸುವ ಬಗ್ಗೆ ಸೂಕ್ತ ತಿಳವಳಿಕೆ ನೀಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ನಾಯಿ ಗಣತಿ
ಜಿಲ್ಲೆಯಲ್ಲಿ ನಾಯಿಗಳ ಗಣತಿ ಮಾಡಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು, ಸತ್ತ ಪ್ರಾಣಿಗಳ ತ್ಯಾಜ್ಯ ವಿಲೇವಾರಿ ಸೂಕ್ತವಾಗಿ ಮಾಡಬೇಕು.. ಪ್ರಸಕ್ತ ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವುದರಿಂದ ಹಾವುಗಳು ಬಿಲದಿಂದ ಹೊರಗೆ ಸಂಚರಿಸುವ ಸಾಧ್ಯತೆಗಳಿದ್ದು, ಸಾರ್ವಜನಿಕರಿಗೆ ಹಾಗೂ ರೈತರಿಗೆ ಸೂಕ್ತ ತಿಳವಳಿಕೆ ನೀಡಬೇಕು. ಉರಗರಕ್ಷಕರ ದೂರವಾಣಿಯನ್ನು ಪ್ರಚುರಪಡಿಸಬೇಕು. ಹಾವು ಕಡಿತದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.ಇದೇ ಸಂದರ್ಭದಲ್ಲಿ ವಿಶೇಷವಾಗಿ ಜೇನು ಕಡಿತದಿಂದ ಸಾವನ್ನಪ್ಪಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಇದಕ್ಕೆ ಸೂಕ್ತ ರಕ್ಷಣಾ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಹಕ್ಕಿ ಜ್ವರ: ಆತಂಕ ಬೇಡ
ಸಭೆಯ ಅಂತ್ಯದಲ್ಲಿ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ ಮುನ್ನೆಚ್ಚರಿಕೆ ಕ್ರಮ ವಹಿಸಿ ಜಿಲ್ಲೆಯಲ್ಲಿ ೬೫೦ ಕೋಳಿ ಫಾರಂಗಳು ಇದ್ದು ಅವುಗಳ ಬಗ್ಗೆ ಆಗಾಗ್ಗೆ ಸ್ವಚ್ಛತೆಯ ಪರಿಶೀಲನೆ ಮಾಡಿ ಎಂದರು. ಸಭೆಯಲ್ಲಿ ಎಡಿಸಿ ಮಂಗಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಜಗದೀಶ್, ಪಶುಪಾಲನೆ ಪಶುವೈದ್ಯ ಉಪನಿರ್ದೇಶಕ ಡಾ.ರಮೇಶ್ ಇದ್ದರು.