ಯಾವುದೇ ಕ್ಷೇತ್ರ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಮುಖ್ಯ

| Published : Mar 05 2024, 01:32 AM IST

ಸಾರಾಂಶ

ಚುನಾವಣೆಯಲ್ಲಿ ನನ್ನ ಗೆಲುವಿಗೆ ಮತದಾರ ಪ್ರಭುಗಳ ಶ್ರೀರಕ್ಷೆಯೇ ಕಾರಣ. ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ ಎಂದು ಭದ್ರಾವತಿ ಕ್ಷೇತ್ರ ಶಾಸಕ ಹಾಗೂ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ್‌ ಶಿವಮೊಗ್ಗದಲ್ಲಿ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಚುನಾವಣೆಯಲ್ಲಿ ನನ್ನ ಗೆಲುವಿಗೆ ಮತದಾರ ಪ್ರಭುಗಳ ಶ್ರೀರಕ್ಷೆಯೇ ಕಾರಣ. ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ ಎಂದು ಭದ್ರಾವತಿ ಕ್ಷೇತ್ರ ಶಾಸಕ ಹಾಗೂ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ್‌ ಭರವಸೆ ನೀಡಿದರು.

ಸೋಮವಾರ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಲಹೆ, ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ಜರುಗುತ್ತಿವೆ. ಮುಂದಿನ ದಿನಗಳಲ್ಲಿ ನಿಗಮ ಮಂಡಳಿಯಿಂದ ಸಾಮಾಜಿಕ ಹಾಗೂ ಸಮಾಜಮುಖಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ. ಯಾವುದೇ ಕ್ಷೇತ್ರಗಳು ಅಭಿವೃದ್ಧಿಯಾಗಲು ಸಾರ್ವಜನಿಕರ ಸಹಕಾರ ಅತ್ಯಮೂಲ್ಯ ಎಂದು ತಿಳಿಸಿದರು.

ಸೂಡಾ ಮಾಜಿ ಅಧ್ಯಕ್ಷ ಎಸ್‌.ಎಸ್‌. ಜ್ಯೋತಿಪ್ರಕಾಶ್ ಮಾತನಾಡಿ, ಬಿ.ಕೆ. ಸಂಗಮೇಶ್ವರ ಅವರು ನಮ್ಮ ಜಿಲ್ಲೆಯ ಒಂದು ಶಕ್ತಿ. ಅವರಿಗೆ ಇನ್ನೂ ಉನ್ನತ ಸ್ಥಾನವಾದ ಮಂತ್ರಿ ಪದವಿ ಸಿಗಬೇಕಾಗಿತ್ತು. ಮುಂಬರುವ ದಿನಗಳಲ್ಲಿ ಮಂತ್ರಿಯಾಗಿ ಇನ್ನು ಹೆಚ್ಚಿನ ಸೇವೆ ಸಲ್ಲಿಸಲು ನಮ್ಮ ಸಮಾಜದವರು ಅವರ ಅಭಿವೃದ್ಧಿಯಲ್ಲಿ ಸದಾ ಕೈ ಜೋಡಿಸುತ್ತೇವೆ ಎಂದು ಹೇಳಿದರು.

ಸಂಘದ ಜಿಲ್ಲಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗಮೇಶ್ವರ ಅವರು ಕ್ಷೇತ್ರ ಅಭಿವೃದ್ಧಿ, ಜನರ ಪ್ರೀತಿ- ವಿಶ್ವಾಸ ಹಾಗೂ ಸಾಧನೆಯಿಂದ ಉನ್ನತ ಸ್ಥಾನ ಲಭಿಸಿದೆ ಎಂದರು.

ಸಮಾಜದ ವತಿಯಿಂದ ಶಾಸಕರಿಗೆ ಹೂಗುಚ್ಚ ನೀಡಿ, ಆತ್ಮೀಯವಾಗಿ ಗೌರವಿಸಿ, ಅಭಿನಯಿಸಲಾಯಿತು. ಶಾಸಕರ ಸಹೋದರ, ಸಮಾಜ ಸೇವಕ ಬಿ.ಕೆ.ಜಗನ್ನಾಥ್, ಶಾಸಕರ ಮಗ ಬಿ.ಕೆ.ಗಣೇಶ್, ಜಿಲ್ಲಾ ಸಂಘದ ಕಾರ್ಯದರ್ಶಿ ಕಿರಣ್ ಕುಮಾರ್, ಪದಾಧಿಕಾರಿಗಳಾದ ರವಿಕುಮಾರ್, ಮಲ್ಲಿಕಾರ್ಜುನ ಕಾನೂರ್, ಎಂ.ವಿ. ಸಜ್ಜನ್ ಶೆಟ್ಟರ್, ಪ್ರೊ. ನೀಲಗುಂದ್, ಚಂದ್ರಶೇಖರ, ರುದ್ರಪ್ಪ, ಭದ್ರಾವತಿ ತಾಲೂಕು ಸಂಘದ ಅಧ್ಯಕ್ಷ ಆನಂದಕುಮಾರ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

- - - -5ಎಸ್‌ಎಂಜಿಕೆಪಿ07:

ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಯಿತು.