ಡೆಂಘೀ-ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಿಸಿ ವಿದ್ಯಾಕುಮಾರಿ

| Published : May 17 2024, 12:33 AM IST / Updated: May 17 2024, 12:34 AM IST

ಡೆಂಘೀ-ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಿಸಿ ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಜಾಥಾದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಪ್ರಾಧ್ಯಾಪಕರು, ಆಶಾ ಕಾರ್ಯಕರ್ತೆಯರು ಭಾಗವಹಿಸಿ ಡೆಂಘೀ ಮತ್ತು ಮಲೇರಿಯ ರೋಗ ನಿಯಂತ್ರಣ ಕುರಿತು ಘೋಷಣೆಗಳನ್ನು ಕೂಗುವುದರ ಮೂಲಕ ಜನರಲ್ಲಿ ಅರಿವು ಮೂಡಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರದ ವಿವಿಧ ನರ್ಸಿಂಗ್ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ರಾಷ್ಟ್ರೀಯ ಡೆಂಘೀ ದಿನಾಚರಣೆ ಹಾಗೂ ವಿಶ್ವ ಮಲೇರಿಯಾ ದಿನಾಚರಣೆ ನಡೆಯಿತು.

ಆ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಬೋರ್ಡ್ ಹೈಸ್ಕೂಲ್‌ನಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ, ಪುರಭವನದಲ್ಲಿ ಸಮಾರೋಪಗೊಂಡಿತು.

ಜಾಥಾವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಿ, ಮಲೇರಿಯಾ ಹಾಗೂ ಡೆಂಘೀ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಅತೀ ಮುಖ್ಯವಾಗಿದ್ದು, ಈ ರೋಗಗಳಿಂದ ಆಗುವ ಅಪಾಯಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದಲೇ ಜಾಥಾವನ್ನು ಕೈಗೊಳ್ಳಲಾಗಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಹಾಗೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮೈತುಂಬಾ ಬಟ್ಟೆಗಳನ್ನು ಧರಿಸುವುದು, ಮಲಗುವಾಗ ಸೊಳ್ಳೆಪರದೆ ಬಳಸಬೇಕು ಎಂದು ಕರೆನೀಡಿದರು.

ಜನಸಾಮಾನ್ಯರಲ್ಲಿ ಡೆಂಘೀ ಹಾಗೂ ಮಲೇರಿಯದಂತೆಯೇ ಸಾಂಕ್ರಾಮಿಕ ರೋಗದ ಲಕ್ಷಣ ಹಾಗೂ ಅದರ ನಿಯಂತ್ರಣ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಶಿಕ್ಷಣವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ನೀಡಬೇಕು ಎಂದರು.

ಜಾಥಾದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಪ್ರಾಧ್ಯಾಪಕರು, ಆಶಾ ಕಾರ್ಯಕರ್ತೆಯರು ಭಾಗವಹಿಸಿ ಡೆಂಘೀ ಮತ್ತು ಮಲೇರಿಯ ರೋಗ ನಿಯಂತ್ರಣ ಕುರಿತು ಘೋಷಣೆಗಳನ್ನು ಕೂಗುವುದರ ಮೂಲಕ ಜನರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ, ಪೌರಾಯುಕ್ತ ರಾಯಪ್ಪ, ಎಂಟಾಮೋಲಜಿಸ್ಟ್, ಮುಕ್ತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಬಸವರಾಜ್, ವಸಂತ್, ರಾಮಚಂದ್ರ ಹಾಗೂ ನರ್ಸಿಂಗ್ ಕಾಲೇಜುಗಳ ಪ್ರಾಧ್ಯಾಪಕ ವೃಂದದವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.