ಶಿಗ್ಗಾಂವಿ-ಸವಣೂರ ಕ್ಷೇತ್ರದಲ್ಲಿ ಮಾ. 31ರಂದು ಯುವ ಮುಖಂಡ ಭರತ್ ಬೊಮ್ಮಾಯಿ ಅವರ ೩೭ನೇ ಜನ್ಮದಿನದ ಅಂಗವಾಗಿ ಆರೋಗ್ಯ, ಶಿಕ್ಷಣ, ಕೃಷಿ ಹಾಗೂ ಯುವಜನ-ಕ್ರೀಡೆ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಹಲವು ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಶಿಗ್ಗಾಂವಿ: ಶಿಗ್ಗಾಂವಿ-ಸವಣೂರ ಕ್ಷೇತ್ರದಲ್ಲಿ ಮಾ. 31ರಂದು ಯುವ ಮುಖಂಡ ಭರತ್ ಬೊಮ್ಮಾಯಿ ಅವರ ೩೭ನೇ ಜನ್ಮದಿನದ ಅಂಗವಾಗಿ ಆರೋಗ್ಯ, ಶಿಕ್ಷಣ, ಕೃಷಿ ಹಾಗೂ ಯುವಜನ-ಕ್ರೀಡೆ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಹಲವು ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಸಣ್ಣ ರೈತರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿ, ಶಿಗ್ಗಾಂವಿ ಕ್ಷೇತ್ರದಲ್ಲಿ ಕೃಷಿ ಸ್ಟೇಯಿಂಗ್ಗಾಗಿ ಉಚಿತ ಡ್ರೋ ನ್ ತಂತ್ರಜ್ಞಾನ ಪರಿಚಯಿಸಲಾಗುತ್ತಿದೆ. ರೈತರ ಹೊಲದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು. ಪ್ರಾರಂಭಿಕ ಹಂತದಲ್ಲಿ ಮೂರು ವಿಭಿನ್ನ ಪ್ರದೇಶಗಳ ರೈತರ ಹೊಲಗಳಲ್ಲಿ ಡ್ರೋನ್ ಸೇವೆಯ ಪ್ರದರ್ಶನ ನಡೆಯಲಿದೆ. ಹಾವೇರಿ ಜಿಲ್ಲೆಯಲ್ಲಿ ನಾಲ್ಕು ಸರ್ಕಾರಿ ಶಾಲೆಗಳ ಸಂಪೂರ್ಣ ರೂಪಾಂತರ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶಾಲೆಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.ಜಿ.ಹೆಚ್.ಪಿ.ಎಸ್ ಬನ್ನೂರು, ಹನುಮರಹಳ್ಳಿ, ಕಬನೂರು ಮತ್ತು ಸುರಪಗಟ್ಟಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂಗಳ ಸ್ಥಾಪನೆ, ಡಿಜಿಟಲ್ ಕಲಿಕೆ ವ್ಯವಸ್ಥೆಗಳು, ಸುಸಜ್ಜಿತ ಡೆಸ್ಕ್-ಬೆಂಚುಗಳು ಮತ್ತು ಶೈಕ್ಷಣಿಕ ಗೋಡೆಚಿತ್ರಗಳ ಮೂಲಕ ಆಧುನಿಕ ಕಲಿಕಾ ವಾತಾವರಣ ನಿರ್ಮಿಸಲಾಗಿದೆ.ಈ ಯೋಜನೆಯಿಂದ ೪೫೦ಕ್ಕೂ ಹೆಚ್ಚು ವಿದ್ಯಾರ್ಥಿಥಿಗಳು ಪ್ರಯೋಜನ ಪಡೆಯುತ್ತಿದ್ದು, ಹಾಜರಾತಿ, ಆಸಕ್ತಿ ಮತ್ತು ಶೈಕ್ಷಣಿಕ ಫಲಿತಾಂಶಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.ಉಚಿತ ಆರೋಗ್ಯ ತಪಾಸಣೆ ಶಿಬಿರ: ಬಂಕಾಪುರ ವಿಠಲ ರುಕ್ಕಿಣಿ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ವಿಹಾನ್ ಹರಂಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಯಪ್ರಿಯ ಕಣ್ಣಿನ ಆಸ್ಪತ್ರೆ ಮತ್ತು ಅಶೋಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ಹೃದಯ, ಕಣ್ಣು, ಕಿವಿ ಮತ್ತು ಎಲುಬು ಸಂಬಂಧಿತ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಗುತ್ತದೆ. ಬಿಪಿ, ಇಸಿಜಿ, ೨ಡಿ ಎಕೋ ಸೇರಿದಂತೆ ತಜ್ಞ ವೈದ್ಯರಿಂದ ಸಮಾಲೋಚನೆ ಸೌಲಭ್ಯವೂ ಲಭ್ಯವಿರುತ್ತದೆ. ಬೊಮ್ಮಾಯಿ ಟ್ರೋಫಿ ೨೦೨೬ ಶಿಗ್ಗಾಂವ-ಸವಣೂರ ಚಾಂಪಿಯನ್ ಲೀಗ್ ಪಂದ್ಯಾವಳಿ ಮಾ. ೨೫ರಂದು ಆರಂಭಗೊಂಡಿದ್ದು, ಮಾ. ೩೧ರಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ. ಕ್ರೀಡಾಸಕ್ತರಿಗೆ ಇದು ಉತ್ತಮ ವೇದಿಕೆಯಾಗಿದ್ದು, ಯುವಜನರಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವ ಉದ್ದೇಶ ಹೊಂದಿದೆ.ಯುವಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ, ಮುಂದಿನ ತಿಂಗಳಲ್ಲಿ ವಿಶೇಷ ಉದ್ಯೋಗ ಮೇಳ ಆಯೋಜಿಸಲು ಯೋಜಿಸಲಾಗಿದೆ. ಇದು ಜನ್ಮದಿನ ಆಚರಣೆಯ ಭಾಗವಾಗಿದ್ದು, ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವ ಮಹತ್ವದ ಹೆಜ್ಜೆಯಾಗಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಆರೋಗ್ಯಕರ ಸಮಾಜ, ಗುಣಮಟ್ಟದ ಶಿಕ್ಷಣ, ಆಧುನಿಕ ಕೃಷಿ ಹಾಗೂ ಸಕ್ರಿಯ ಯುವಶಕ್ತಿಯನ್ನು ರೂಪಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಜನಪರ ಕಾರ್ಯಕ್ರಮಳನ್ನು ಯಶಸ್ವಿಗೊಳಿಸಲು ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.