ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಮಾ.೧೭ರಂದು ಪುತ್ತೂರಿನ ಅನುರಾಗ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ ಪುರಂದರ ಭಟ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.ಅವರು ಗುರುವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ಕರ್ನಾಟಕ ಸಂಘ. ಪುತ್ತೂರು, ಶ್ರೀ ಲಕ್ಷ್ಮೀಶ ತೋಳ್ವಾಡಿ ಸಾರ್ವಜನಿಕ ಅಭಿನಂದನಾ ಸಮಿತಿ ಪುತ್ತೂರು ಸಹಯೋಗದಲ್ಲಿ ನಡೆಯಲಿರುವ ಅಭಿನಂದನಾ ಕಾರ್ಯಕ್ರಮವನ್ನು ಪ್ರಾಧ್ಯಾಪಕ, ಸಾಹಿತಿ ಡಾ. ನರೇಂದ್ರ ರೈ ದೇರ್ಲ ಉದ್ಘಾಟಸಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಬಿ. ಪುರಂದರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಬಯಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಹಿರಿಯ ವಿದ್ವಾಂಸ ಡಾ. ತಾಳ್ತಜೆ ವಸಂತ ಕುಮಾರ ಅವರು ಲಕ್ಷ್ಮೀಶ ತೋಳ್ವಾಡಿ ಅವರನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ಪ್ರಾಧ್ಯಾಪಕ ಡಾ. ವರದರಾಜ ಚಂದ್ರಗಿರಿ ಅವರು ಲಕ್ಷ್ಮೀಶ ತೋಳ್ಳಾಡಿಯವರ ಭಾರತ ಯಾತ್ರೆ ಕೃತಿಯ ಕುರಿತು ಮಾತನಾಡಲಿದ್ದಾರೆ. ಹಿರಿಯ ಸಾಹಿತಿ ಗುರುರಾಜ ಮಾರ್ಪಳ್ಳಿ ಅಭಿನಂದನಾ ನುಡಿಗಳನ್ನಾಡಲಿದ್ದರೆ. ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಗೌರವ ಉಪಸ್ಥಿತರಿವರು. ಸಾರ್ವಜನಿಕರ ಪರವಾಗಿ ಸವಣೂರು ಸೀತಾರಾಮ ರೈ ಶುಭಸಂಶನೆ ಮಾಡಲಿದ್ದಾರೆ. ಮಧ್ಯಾಹ್ನ ಗಂಟೆ ೩ ರಿಂದ ಡಾ. ಶೋಭಿತಾ ಸತೀಶ್ ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಬಿ. ಐತ್ತಪ್ಪ ನಾಯ್ಕ ಇದ್ದರು.